LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ಯಾರಾ ಶೂಟಿಂಗ್ ವಿಶ್ವಕಪ್: ಭಾರತಕ್ಕೆ ಮತ್ತೆರಡು ಬೆಳ್ಳಿ

ನವದೆಹಲಿ: ಭಾರತದ ರುದ್ರಾಂಶ್ ಖಂಡೇಲ್ವಾಲ್ ಮತ್ತು ನಿಹಾಲ್ ಸಿಂಗ್ ಅವರು ಇಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್‍ನ ಮಿಕ್ಸೆಡ್ 50 ಮೀಟರ್ ಪಿಸ್ತೂಲ್ (ಎಸ್‍ಎಚ್1 ಕೆಟಗರಿ) ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದರು. ಕೂಟದ ಮೂರನೇ ದಿನವಾದ ಸೋಮವಾರ ಆತಿಥೇಯ ಭಾರತಕ್ಕೆ ಚಿನ್ನದ ಪದಕ ಒಲಿಯಲಿಲ್ಲ. ಆದರೆ, ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಮತ್ತು ಕಂಚು ಹಾಗೂ ತಂಡ ವಿಭಾಗದಲ್ಲಿ ಬೆಳ್ಳಿ ಪದಕ ದೊರಕಿದೆ.

ವೈಯಕ್ತಿಕ ವಿಭಾಗದ 50 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‍ಗೆ ಈಗಾಗಲೇ ಅರ್ಹತೆ ಪಡೆದಿರುವ ರುದ್ರಾಂಶ್ 223.2 ಅಂಕದೊಂದಿಗೆ ಎರಡನೇ ಸ್ಥಾನ ಪಡೆದರು. ನಿಹಾಲ್ (202.8) ಮೂರನೇ ಸ್ಥಾನ ಗಳಿಸಿದರು. ಇಟಲಿಯ ಡೇವಿಡ್ ಫ್ರಾನ್ಸೆಸ್ಶೆಟ್ಟಿ 230.0 ಚಿನ್ನ ಗೆದ್ದರು.

ತಂಡ ವಿಭಾಗದ ಮಿಕ್ಸೆಡ್ 50 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ರುದ್ರಾಂಶ್ (530), ನಿಹಾಲ್ (527) ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಸಿಂಗ್ರಾಜ್ (516) ಅವರನ್ನು ಒಳಗೊಂಡ ಭಾರತದ ಶೂಟರ್‍ಗಳು ಬೆಳ್ಳಿ ಪದಕ ಗೆದ್ದುಕೊಂಡರು. ಭಾರತದ ತಂಡ 1573 ಪಾಯಿಂಟ್ಸ್ ಗಳಿಸಿದರೆ, 1611 ಪಡೆದ ಚೀನಾ ತಂಡ ಚಿನ್ನವನ್ನು ಗೆದ್ದುಕೊಂಡಿತು.ರೈಫಲ್ ಶೂಟರ್ ಮೋನಾ ಅಗರವಾಲ್ (ಮಹಿಳೆಯರ 10 ಮೀಟರ್ ಏರ್ ರೈಫಲ್) ಈ ಕೂಟದಲ್ಲಿ ಭಾರತಕ್ಕೆ ಏಕೈಕ ಚಿನ್ನ ತಂದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು