LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆಗೆ ಯತ್ನ ಮಾಜಿ ಸಚಿವ ಸೇರಿದಂತೆ ಇಬ್ಬರು ಪೊಲೀಸ್ ವಶಕ್ಕೆ

ತುಮಕೂರು: ಹೇಮಾವತಿ ಎಕ್ಸ್‍ಪ್ರೆಸ್ ಕೆನಾಲ್ ಯೋಜನೆ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾದ ಮಾಜಿ ಸಚಿವ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ನೀರಾವರಿ ಯೋಜನೆ `ಹೇಮಾವತಿ ಎಕ್ಸ್‍ಪ್ರೆಸ್ ಕೆನಾಲ್' ವಿರುದ್ಧ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆಗೆ ಹೇಮಾವತಿ ಎಕ್ಸ್‍ಪ್ರೆಸ್ ಕೆನಾಲ್ ವಿರೋಧಿ ಸಮಿತಿ ಧರಣಿಗೆ ಮುಂದಾಗಿತ್ತು.ಇಂದು ಬೆಳಿಗ್ಗೆ ತುಮಕೂರಿನ ಹೆಗ್ಗೆರೆಯಲ್ಲಿ ಇರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮನೆ ಎದುರು ಪಕ್ಷಾತೀತವಾಗಿ ಹೋರಾಟ ನಡೆಸಲು ಸಮಿತಿ ಮುಂದಾಗಿತ್ತು.

ಮಾಜಿ ಸಚಿವ ಸೊಗಡು ಶಿವಣ್ಣ, ಗ್ರಾಮಾಂತರ ಶಾಸಕ ಸುರೇಶ್ ಗೌಡ,ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲಾ ಜಯರಾಮ್ ಸೇರಿದಂತೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು.ಆದರೆ ಪ್ರತಿಭಟನೆಗೂ ಮುನ್ನವೇ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಬಿಜೆಪಿ ಮುಖಂಡ ಪ್ರಭಾಕರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆಗೆ ತಯಾರಿ ನಡೆಸುತ್ತಿದ್ದಾಗ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ.

ಸೊಗಡು ಶಿವಣ್ಣರನ್ನ ವಶಕ್ಕೆ ಪಡೆದು ಪ್ರತಿಭಟನೆ ಹತ್ತಿಕ್ಕಲು ಮುಂದಾದ ಪೊಲೀಸರ ನಡೆ ಖಂಡಿಸಿ ಡಿಆರ್ ಕಚೇರಿ ಬಳಿ ಪ್ರತಿಭಟಿಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಖುದ್ದು ಸ್ಥಳಕ್ಕೆ ಬಂದ ತುಮಕೂರು ಎಸ್‍ಪಿ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದರು.

ಎಕ್ಸ್‍ಪ್ರೆಸ್ ಕೆನಾಲ್ ತುಮಕೂರು ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯವ ನೀರಾವರಿ ಯೋಜನೆಯಾಗಿದೆ. ರಾಮನಗರಕ್ಕೆ ನೀರು ಹರಿದರೆ ತುಮಕೂರು ಜಿಲ್ಲೆಯ ಜನತೆಗೆ ನೀರಿನ ಸಂಕಷ್ಟ ಎದುರಾಗಲಿದೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು