LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ತೆರೆಗೆ ಬರಲು ಉಡಾಳ ಸಿದ್ದ"

ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾAಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ "ಉಡಾಳ" ಚಿತ್ರದ ಟೀಸರ್ "ಸರಿಗಮ" ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ.

ಉತ್ತರ ಕರ್ನಾಟಕದ ಹಿನ್ನೆಲೆ ಧ್ವನಿಯಲ್ಲಿ ಮೂಡಿಬಂದಿರುವ "ಉಡಾಳ" ಚಿತ್ರದ ಟೀಸರ್ ಗೆ ನೋಡುಗರು ಫಿದಾ ಆಗಿದ್ದಾರೆ. ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳನ್ನು ಪೂರ್ಣಗೊಳಿಸಿರುವ "ಉಡಾಳ" ತೆರೆಗೆ ಬರಲು ಸಿದ್ದವಾಗಿದ್ದಾನೆ. ಇದೊಂದು ಉತ್ತರ ಕರ್ನಾಟಕ ಭಾಗದ ಚಿತ್ರವಾಗಿದ್ದು, ಇಡೀ ಚಿತ್ರೀಕರಣ ಬಿಜಾಪುರ(ವಿಜಯಪುರ)ದಲ್ಲೇ ನಡೆದಿದೆ. "ಪದವಿಪೂರ್ವ" ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಪೃಥ್ವಿ ಶಾಮನೂರು "ಉಡಾಳ" ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೃತಿಕ ಶ್ರೀನಿವಾಸ್ "ಉಡಾಳ" ಚಿತ್ರದ ನಾಯಕಿ. ಬಲ ರಾಜ್ವಾಡಿ, ಮಾಳು ನಿಪ್ನಾಳ್, ಹರೀಶ್ ಹಿರಿಯೂರು, ಬಿರಾದರ್, ಸುಮಿತ್ ಸಂಕೋಜಿ, ವಾದಿರಾಜ ಬಬ್ಲಾದಿ, ಪ್ರವೀಣ್ ಗಸ್ತಿ, ದಯಾನಂದ ಬೀಳಗಿ, ರೇಣುಕ, ಶ್ರೀಧರ್, ದಾನಪ್ಪ, ಶಿಲ್ಪ ಶಾಂತಕುಮಾರ್, ಸೋನಿಯಾ ಮುಂತಾದವು ತಾರಾಬಳಗದಲ್ಲಿದ್ದಾರೆ.

"ಉಡಾಳ" ಉತ್ತರ ಕರ್ನಾಟಕದ ಭಾಗದ ದೊಡ್ಡ ಮಟ್ಟದ ಪಕ್ಕಾ ಕಮರ್ಷಿಯಲ್ ಜಾನರ್ ಚಿತ್ರವಾಗಿದೆ. ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅವರು ಬಿಜಾಪುರ ಮೂಲದವರು.ಈ ಹಿಂದೆ "ಪದವಿ ಪೂರ್ವ" ಚಿತ್ರ ನಿರ್ಮಾಣ ಮಾಡಿದ್ದ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಮತ್ತೆ ಈ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ.

ಯೋಗರಾಜ್ ಭಟ್ ಅವರು ಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಕೃಷ್ಣಂ ಪ್ರಣಯ ಸಖಿ ಚಿತ್ರದ "ದ್ವಾಪರ" ಹಾಡಿನ ಖ್ಯಾತಿಯ ಜಸ್ಕರ್ಣ್ ಸಿಂಗ್, ಉತ್ತರ ಕರ್ನಾಟಕದ ಖ್ಯಾತಿಯ ಮಾಳು ನಿಫ್ನಾಳ್, ಬಾಳು ಬೆಳಗುಂದಿ, ಕರಿಬಸವ, ಸೃಷ್ಟಿ ಶಾಮನೂರ್ ಮತ್ತು ಚೇತನ್ ಸೋಸ್ಕ ರವರು ಹಾಡಿದ್ದು, ಶಿವಶಂಕರ್  ನೂರAಬಡ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕಾAತಾರ ಖ್ಯಾತಿಯ ಅರ್ಜುನ್ ರಾಜ್, ವಿನೋದ್ ಸಾಹಸ ನಿರ್ದೇಶನ ಹಾಗೂ ಭಜರಂಗಿ ಮೋಹನ್, ನರಘು ಅವರ ನೃತ್ಯ ನಿರ್ದೇಶನ ಹಾಗೂ
ವೀರೇಶ್ ಪಿ.ಎಂ ಅವರ ಸಹ ನಿರ್ದೇಶನ "ಉಡಾಳ"  ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು