LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ವರ್ಣರಂಜಿತ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿ

ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ಒಡೆಯರ್, ಡಾ||ಸೂರಿ, ವೀರೇಶ ಚಿತ್ರಮಂದಿರದ ಕುಶಾಲ್ ಮುಂತಾದ ಗಣ್ಯರು ಪ್ರೀ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿ "UI" ಗೆ ಶುಭ ಕೋರಿದರು.

ನಾನು "ಶ್" ಚಿತ್ರದ ಪ್ರೀಮಿಯರ್ ಶೋ ಅನ್ನು ಪಲ್ಲವಿ ಚಿತ್ರಮಂದಿರದಲ್ಲಿ ನೋಡಿದ್ದೆ. ಆನಂತರ "ಓಂ" ಚಿತ್ರದ ಚಿತ್ರೀಕರಣ ಸಮಯದಲ್ಲಿ ಉಪೇಂದ್ರ ಅವರ ಕಾರ್ಯವೈಖರಿ ನೋಡಿ, ನೀವು ಭಾರತ ಚಿತ್ರರಂಗದ ಮಹಾನ್ ನಿರ್ದೇಶಕರಲ್ಲೊಬ್ಬರಾಗುತ್ತಾರೆ ಎಂದು ಹೇಳಿದ್ದೆ. ಆಗಿನಿಂದಲೂ ನನಗೆ ಉಪೇಂದ್ರ ಅವರ ಕಂಡರೆ ವಿಶೇಷ ಪ್ರೀತಿ. ನಾನು ಕೂಡ "UI" ಚಿತ್ರವನ್ನು ನೋಡುವ ಕಾತುರದಲ್ಲಿದ್ದೇನೆ ಎಂದು ಶಿವರಾಜಕುಮಾರ್ ತಿಳಿಸಿದರು.

ನಾವು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿಗಳು. ಅವರ ಚಿತ್ರಗಳನ್ನು ನೋಡಿ ಬೆಳೆದವರು ನಾವು. ಒಂಭತ್ತು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ನೋಡಲು ಕಾಯುತ್ತಿರುವುದಾಗಿ ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ್ ಹೇಳಿದರು. ಇಂದು ನಮ್ಮ ಚಿತ್ರಕ್ಕೆ            ಪ್ರೋತ್ಸಾಹ ನೀಡಲು ಬಂದಿರುವ ಶಿವಣ್ಣ, ವಿಜಯ್, ಧನಂಜಯ್ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ಹಾಗೂ ನಿರ್ದೇಶಕ ಉಪೇಂದ್ರ, ಈ ಚಿತ್ರ ಆರಂಭವಾಗಲು ಕಾರಣ ಕೆ.ಪಿ.ಶ್ರೀಕಾಂತ್.

5 ವರ್ಷಗಳ ಇತಿಹಾಸವಿರುವ ಲಹರಿ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡಿದ್ದು, ಮನೋಹರನ್ ಹಾಗೂ ಶ್ರೀಕಾಂತ್ ಅವರು ನಿರ್ಮಾಪಕರಾಗಿದ್ದಾರೆ. ನವೀನ್, ಲಹರಿ ವೇಲು, ನಾಗೇಂದ್ರ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇದು ನನ್ನೊಬ್ಬನ ಚಿತ್ರವಲ್ಲ. ನನ್ನ ತಂಡದ ಚಿತ್ರ. ಈ ಚಿತ್ರ ಉತ್ತಮವಾಗಿ ಮೂಡಿಬರಲು ಇವರೆಲ್ಲರ ಸಹಕಾರವೇ ಕಾರಣ. ಈ ಸಮಯದಲ್ಲಿ ಚಿತ್ರತಂಡದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಇದೇ ಡಿ.20ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು