LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಅಂಡರ್-19 ವಿಶ್ವಕಪ್ ಟೂರ್ನಿ: ಅಮೆರಿಕ ತಂಡ ಉಡೀಸ್ ಮಾಡಿದ ಭಾರತ ಯಂಗ್ ಟೈಗರ್ಸ್!

ಅಂಡರ್-19 ವಿಶ್ವಕಪ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಮತ್ತೆ ಘರ್ಜಿಸಿದ ಭಾರತ ಯಂಗ್ ಟೈಗರ್ಸ್ ಅಮೆರಿಕ ತಂಡವನ್ನು ಉಡೀಸ್ ಮಾಡಿದೆ.ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಅಮೆರಿಕವನ್ನು ಎದುರಿಸಿದ ಭಾರತ 201 ರನ್‍ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಲೀಗ್ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 326 ರನ್ ಗಳಿಸಿತ್ತು. ಅರ್ಶಿನ್ ಕುಲಕರ್ಣಿ 8 ಬೌಂಡರಿ ಮತ್ತು 3 ಸಿಕ್ಸರ್‍ಗಳ ಸಹಿತ 108 ರನ್ ಸಿಡಿಸಿದರು. ಮುಶೀರ್ 73, ನಾಯಕ ಉದಯ್ ಸಾಹರನ್ 35, ಪ್ರಿಯಾಂಶು ಮೊಲಿಯಾ 27, ಸಚಿನ್ ದಾಸ್ 20 ರನ್ ಗಳಿಸಿದರು.

327 ರನ್‍ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಅಮೆರಿಕ ತಂಡ 8 ವಿಕೆಟ್ ಕಳೆದುಕೊಂಡು ಕೇವಲ 125 ರನ್? ಗಳಿಸಲಷ್ಟೇ ಶಕ್ತವಾಯಿತು. ಅಮೆರಿಕ ಬ್ಯಾಟರ್ ಉತ್ಕರ್ಷ್ ಶ್ರೀವಾಸ್ತವ 40 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್ ಸಹ ಉತ್ತಮ ಪ್ರದರ್ಶನ ನೀಡಲಿಲ್ಲ. ಭಾರತದ ಪರ ನಮನ್ ತಿವಾರಿ 4 ವಿಕೆಟ್ ಪಡೆದರು. ಅರ್ಶಿನ್ ಕುಲಕರ್ಣಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಲೀಗ್‍ನ ಮೊದಲ ಪಂದ್ಯದಲ್ಲಿ ಬಾಂಗ್ಲಾ ಪಡೆಯನ್ನು ಮಣಸಿದ್ದ ಭಾರತ, ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧವೂ 201 ರನ್‍ಗಳಿಂದ ಗೆಲುವು ಸಾಧಿಸಿತ್ತು. ಇದೀಗ ಲೀಗ್‍ನ ಕೊನೆಯ ಪಂದ್ಯದಲ್ಲೂ ಅಮೆರಿಕ ವಿರುದ್ಧ 201 ರನ್‍ಗಳ ಬೃಹತ್ ಗೆಲುವು ದಾಖಲಿಸಿ, 3 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು