LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ "ಅನ್ ಲಾಕ್ ರಾಘವ" ಚಿತ್ರತಂಡದಿಂದ ಹಾಡಿನ ಉಡುಗೊರೆ

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ "ಅನ್ ಲಾಕ್ ರಾಘವ" ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ "ನನ್ನ ಹುಡುಗಿ" ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬದಂದುA2 music ಮೂಲಕ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

ಹಲವು ವಿಶೇಷಗಳನ್ನು ಹೊಂದಿರುವ "ಅನ್ ಲಾಕ್ ರಾಘವ" ಚಿತ್ರದ ಪೆಪೋಸ್ಟ್ ಪ್ರೊ ಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಬರಲಿದೆ. ನಾಯಕ ಮಿಲಿಂದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿನ ಚಿತ್ರೀಕರಣ ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ನಡೆದಿದೆ.

ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಮಿಲಿಂದ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

ಸತ್ಯಪ್ರಕಾಶ್ ಅವರು ಈ ಚಿತ್ರದ ಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದಾರೆ. ನನ್ನ ಮಗ ಮಿಲಿಂದ್ ನಾಯಕನಾಗಿ ನಟಿಸಿರುವ ಈ ಚಿತ್ರ ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬರುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ  ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ.ಡಿ. ಮತ್ತೊಬ್ಬ ನಿರ್ಮಾಪಕರಾದ ಗಿರೀಶ್ ಕುಮಾರ್ ಸಹ ಚಿತ್ರದ ಕುರಿತು ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ತಿಳಿಸಿದರು.

ಹೃದಯಶಿವ ಅವರು ಬರೆದು ಅನೂಪ್ ಸೀಳಿನ್ ಸಂಗೀತ ನೀಡಿ, "ವರಾಹ ರೂಪಂ" ಹಾಡಿನ ಖ್ಯಾತಿಯ ಸಾಯಿವಿಘ್ನೇಶ್ ಹಾಡಿರುವ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರದುರ್ಗದ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡು ನನ್ನ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವುದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ಮಿಲಿಂದ್.ನಾಯಕಿ ರೆಚೆಲ್ ಡೇವಿಡ್ ಸಹ ಹಾಡಿನ ಬಗ್ಗೆ ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ಕೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು