LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Uttara Kannada

ಜ.8ಕ್ಕೆ ಚಿನ್ನ ಲೇಪಿತ ಭಗವದ್ಗೀತೆ ಪುಸ್ತಕ ಅನಾವರಣ

ಉಡುಪಿ: ಉಡುಪಿಯ  ಶ್ರೀ ಕೃಷ್ಣ ದೇವಸ್ಥಾನದಲ್ಲಿ ಜನವರಿ 8ರಂದು  ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ.

ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೊಬ್ಬರು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದಪಡಿಸಿರುವ ಹೊನ್ನಿನ ಭಗವದ್ಗೀತಾ ಹೊತ್ತಿಗೆ ಅಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು