LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಾಮರಸ ಅನಾವರಣ

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ "  ಪ್ರೊ ಡಕ್ಷನ್ ನಂ 4" ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ "ರಾಮರಸ" ಎಂದು ನಾಮಕರಣ ಮಾಡಲಾಗಿದೆ. "ಜಟ್ಟ", " ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು.

ಶ್ರೀರಾಮನವಮಿಯ ದಿವಸದಂದೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ನಡೆಯಬೇಕಿತ್ತು. ಆದರೆ ಕಾರಣಾಂತರದಿಂದ ಮಾರನೇ ದಿನ ಬಿಡುಗಡೆಯಾಗುತ್ತಿದೆ. "ರಾಮರಸ" ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧ್ರುವ ಸರ್ಜಾ ಹಾರೈಸಿದರು.

"ರಾಮರಸ" , ಹಾರಾರ್ ಕಾಮಿಡಿ ಜಾನರ್ ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಭೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎಂದು ನಿರ್ದೇಶಕ ಬಿ.ಎಂ.ಗಿರಿರಾಜ್ ತಿಳಿಸಿದರು.

2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ. ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ.

ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, .ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ.

ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್ ಈಗಾಗಲೇ "ರಾಮರಸ" ದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೊತ್ಸಾಹವಿರಲಿ. ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ಮಾಪಕ ಗುರು ದೇಶಪಾಂಡೆ.

ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತಿರುವ ಹದಿನಾರು ನೂತನ ಪ್ರತಿಭೆಗಳು ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರವಹಿಸಲಿರುವ ಮೂವರು ನವ ಸಹ ನಿರ್ದೇಶಕರು ಹಾಗೂ ನೂತನ ಸಹ ನಿರ್ಮಾಪಕರೊಬ್ಬರು ತಮ್ಮ ಪರಿಚಯ ಮಾಡಿಕೊಂಡರು. ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್ ಹೆಚ್ ಸಿ ಗೌಡ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು