LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಮರ್ಪಕ ಗ್ಯಾಸ್ ಪೂರೈಕೆಗೆ ಕೇಂದ್ರಕ್ಕೆ ಒತ್ತಾಯ

ಬೆಂಗಳೂರು; ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಂಗಳೂರು ಮಹಾನಗರದಲ್ಲಿ ಗ್ಯಾಸ್ ಸಮಸ್ಯೆ ತಲೆದೋರಿದೆ.
ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್, ಆಟೋಗಳಿಗೆ ಎಲ್‌ಪಿಜಿ ಸಿಎನ್‌ಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ.
ತಾವು ಕೇಂದ್ರ ಸರ್ಕಾರದ ಸಂಪರ್ಕದಲ್ಲಿರುವುದಾಗಿ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಬಾಗಲಕೋಟೆಯಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಇತರೆ ರಾಜ್ಯಗಳಿಗೆ ಪೂರೈಸಿದಂತೆ ತಮ್ಮ ರಾಜ್ಯಕ್ಕೂ ಸಮರ್ಪಕವಾಗಿ ಗ್ಯಾಸ್ ಪೂರೈಸುವಂತೆ ಒತ್ತಾಯಿಸಲಾಗಿದೆ. ಗ್ಯಾಸ್ ಪೂರೈಕೆಯಲ್ಲಿ ಯಾವ ತಾರತಮ್ಯ ಮಾಡಬಾರದು ಎಂದು ಮನವಿ ಮಾಡಲಾಗಿದೆ. ಆದಷ್ಟೂ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ಕೇಂದ್ರ ಸರ್ಕಾರ ಗ್ಯಾಸ್ ಪೂರೈಕೆಯಲ್ಲಿ ಇತರೆ ರಾಜ್ಯಗಳಿಗೆ ಪೂರೈಸಿದಂತೆ ನಮ್ಮ ರಾಜ್ಯಕ್ಕೂ ಪೂರೈಸಬೇಕು. ಮಲತಾಯಿ ದೋರಣೆ ತೋರಬಾರದು. ಇದು ಸರಿಯಾದ ಕ್ರಮವಲ್ಲ. ಈಗಾಗಲೇ ಸಚಿವ ಮುನಿಯಪ್ಪ ಅವರು ಕೇಂದ್ರಕ್ಕೂ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳು ಸಹ ಈ ಸಮಸ್ಯೆ ಪರಿಹರಿಸಲು ಕೇಂದ್ರದ ಜತೆ ಸಂಪರ್ಕದಿAದಿರಲು ಮಂತ್ರಿ ಹಾಗೂ ಅಧಿಕಾರಿಗಳ ನಿಯೋಜನೆ ಮಾಡಲಿದ್ದಾರೆ. ಸಚಿವ ಮುನಿಯಪ್ಪ ಅವರನ್ನೇ ಈ ಸಂಬಂಧ ಸಂಪರ್ಕ ಸಾಧಿಸಲು ಸೂಚಿಸಬಹುದು ಎಂದಿದ್ದಾರೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಗ್ಯಾಸ ಸಮಸ್ಯೆಗೆ ಪ್ರಧಾನಿ ಮೋದಿ ಕಾರಣ ಎಂದು ಆಕ್ಷೇಪ ಮಾಡಿದ್ದಾರೆ. ಜನರು ಆರು ತಿಂಗಳ ಕಾಲ ತಮ್ಮ ಜೀವನ ನಿಭಾಯಿಸಲು ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದು ಹೇಳಿರುವ ಅವರು, ಕೂಡಲೇ ಪ್ರಧಾನಿ ಮೋದಿ ಅವರು ತಮ್ಮ ಮೌನ ಮುರಿದು ಮಾತನಾಡಿ ಜನತೆಗೆ ರವಾನೆ ಸಂದೇಶಿಸಬೇಕು ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು