LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಾಜಾದಲ್ಲಿ ಕದನ ವಿರಾಮ; ವಿಶ್ವಸಂಸ್ಥೆ ನಿರ್ಣಯಕ್ಕೆ ವಿಟೊ ಅಧಿಕಾರ ಬಳಸಿದ ಅಮೆರಿಕ

ವಿಶ್ವಸಂಸ್ಥೆ: ಭದ್ರತಾ ಮಂಡಳಿಯ ಸದಸ್ಯರು ಸೇರಿದಂತೆ ಅನೇಕ ರಾಷ್ಟ್ರಗಳ ಬೆಂಬಲದೊಂದಿಗೆ ಗಾಜಾದಲ್ಲಿ ಮಾನವೀಯ ನೆಲೆಯಲ್ಲಿ ತಕ್ಷಣ ಕದನ ವಿರಾಮ ಘೋಷಿಸುವ ಭದ್ರತಾ ಮಂಡಳಿಯ ನಿರ್ಣಯಕ್ಕೆ ಅಮೆರಿಕ ವಿಟೊ ಅಧಿಕಾರ ಚಲಾಯಿಸಿದೆ.

ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳ ಪೈಕಿ 13 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಬ್ರಿಟನ್ ಮತದಾನದಿಂದ ದೂರ ಉಳಿಯಿತು.ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯನ್ನು ಖಂಡಿಸುವಲ್ಲಿ ಮತ್ತು ಇಸ್ರೇಲ್‍ನ ಆತ್ಮರಕ್ಷಣೆ ಹಕ್ಕನ್ನು ಅನುಮೋದಿಸುವಲ್ಲಿ ಭದ್ರತಾ ಮಂಡಳಿ ವಿಫಲಗೊಂಡಿದೆ ಎಂದು ಅಮೆರಿಕ ದೂರಿದೆ.

ಈ ಕುರಿತು ಹೇಳಿಕೆ ನೀಡಿರುವ ಅಮೆರಿಕದ ಉಪ ರಾಯಭಾರಿ ರಾಬರ್ಟ್ ವುಡ್, ಕದನ ವಿರಾಮ ಘೋಷಿಸುವುದರೊಂದಿಗೆ ಗಾಜಾ ಮೇಲೆ ಮತ್ತೆ ಹಮಾಸ್ ನಿಯಂತ್ರಣ ಸಾಧಿಸಲಿದ್ದು, ಮುಂದಿನ ಯುದ್ಧಕ್ಕೆ ಅವಕಾಶ ಮಾಡಿಕೊಡಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ಜನರು ಶಾಂತಿಯುತವಾಗಿ ಬದುಕಬೇಕು.

ಆದರೆ ದೀರ್ಘಕಾಲದ ಶಾಂತಿಯನ್ನು ಹಮಾಸ್ ಬಯಸುವುದಿಲ್ಲ. ಹಾಗಾಗಿ ಶಾಂತಿಯನ್ನು ಅಮೆರಿಕ ಬಯಸುತ್ತಾದರೂ ತಕ್ಷಣದ ಕದನ ವಿರಾಮ ನಿರ್ಣಯವನ್ನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‍ನಲ್ಲಿ ಸುಮಾರು 1,200 ಮಂದಿ ಮೃತಪಟ್ಟಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ 17,400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 40 ಸಾವಿರ ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು