LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶ್ವ ಟೆನ್‍ಕೆ ಓಟ: ವೆಲೇರಿ ಆಯಡಮ್ಸ್ ರಾಯಭಾರಿ

ಬೆಂಗಳೂರು: ನ್ಯೂಜಿಲೆಂಡ್‍ನ ವಿಶ್ವಖ್ಯಾತ ಶಾಟ್‍ಪಟ್ ಥ್ರೊ ಸ್ಪರ್ಧಿ ವೆಲೇರಿ ಆಯಡಮ್ಸ್ ಅವರನ್ನು 16ನೇ ಟಿಸಿಎಸ್ ವಿಶ್ವ 10ಕೆ ಬೆಂಗಳೂರು ಓಟದ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಆಯಡಮ್ಸ್ ಅವರು 2008 (ಬೀಜಿಂಗ್) ಮತ್ತು 2012ರ (ಲಂಡನ್) ಒಲಿಂಪಿಕ್ಸ್‍ನಲ್ಲಿ ಮಹಿಳಾ ವಿಭಾಗದಲ್ಲಿ ಶಾಟ್‍ಪಟ್ ಚಿನ್ನ ಗೆದ್ದಿದ್ದರು.

ರಿಯೊ ಒಲಿಂಪಿಕ್ಸ್‍ನಲ್ಲಿ ಬೆಳ್ಳಿ ಹಾಗೂ ಟೋಕಿಯೊ ಒಲಿಂಪಿಕ್ಸ್‍ನಲ್ಲಿ ಕಂಚಿನ ಪದಕ ಗೆದ್ದ ಬಳಿಕ ನಿವೃತ್ತಿ ಪಡೆದಿದ್ದರು.‘ಓಟದ ಬಗ್ಗೆ ಭಾರತದಲ್ಲಿ ಹೆಚ್ಚುತ್ತಿರುವ ಉತ್ಸಾಹವು ಪ್ರೇರಣಾದಾಯಿಯಾಗಿದೆ’ ಎಂದು 39 ವರ್ಷದ ಆಯಡಮ್ಸ್ ಈ ಸಂಬಂಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅವರು ನಾಲ್ಕು ಬಾರಿ ವಿಶ್ವ ಚಾಂಪಿಯನ್ ಕೂಡ ಆಗಿದ್ದಾರೆ.

ವೆಲೇರಿ ಅವರು ಪ್ರಸ್ತುತ ವಿಶ್ವ ಅಥ್ಲೆಟಿಕ್ ಕಮಿಷನ್‍ನಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ವಿಶ್ವದಾದ್ಯಂತ ಅಥ್ಲೀಟುಗಳ ಹಕ್ಕುಗಳ ಪರ ಅವರು ಹೋರಾಟ ನಡೆಸುತ್ತಿದ್ದಾರೆ. ವಿಶ್ವ ಯುವ, ಜೂನಿಯರ್ ಮತ್ತು ಸೀನಿಯರ್ ಮಟ್ಟದಲ್ಲಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಮೂರನೇ ಮಹಿಳೆ ಎನ್ನು ಹಿರಿಮೆಯೂ ಅವರದು. 2014ರಲ್ಲಿ ಅಂತರರಾಷ್ಟ್ರೀಯ ಅಮೆಚೂರ್ ಅಥ್ಲೆಟಿಕ್ ಫೆಡರೇಷನ್ ಅವರಿಗೆ ‘ವಿಶ್ವದ ವರ್ಷದ ಅಥ್ಲೀಟ್’ ಗೌರವ ಪ್ರದಾನ ಮಾಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು