ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಹೀಗಿದ್ದರೂ ಪ್ರಕರಣ ಸಂಬಂಧ ನಾಗೇಂದ್ರಗೆ ಸಂಕಷ್ಟ ಮಾತ್ರ ತಪ್ಪಿಲ್ಲ. ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಿಂದ ತನಿಖೆ ನಡೆಯುತ್ತಿದ್ದು, ಅವು ಇನ್ನೂ ಕ್ಲೀನ್ ಚಿಟ್ ನೀಡಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳಿಗೆ ವಿಚಾರಣೆಗಾಗಿ ಅಃI ನೋಟೀಸ್ ನೀಡುತ್ತಲೇ ಬಂದಿದೆ. ಹೀಗಾಗಿ ನಾಗೇಂದ್ರಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಗೋದು ಅಷ್ಟು ಸುಲಭವಲ್ಲ ಎನ್ನುವ ಚರ್ಚೆ ಶುರುವಾಗಿದೆ.ಹಗರಣದ ಆರೋಪ ಹೊತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಈ ಪ್ರಕರಣದ ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಿ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ನಿಗಮದ ಎಂಡಿ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಹಗರಣದ ಪ್ರಮುಖ ಆರೋಪಿಗಳಾಗಿದ್ದು, ನಿಗಮದ ಹಣವನ್ನು ನಾಗೇಂದ್ರ ಎಲ್ಲೂ ದುರುಪಯೋಗ ಮಾಡಿಕೊಂಡಿಲ್ಲ. ಎಂಡಿ ಜೊತೆ ನೆಕ್ಕುಂಟಿ ನಾಗರಾಜ್ ಡೀಲ್ ಮಾಡಿದ್ದ. ದುಪ್ಪಟ್ಟು ಮಾಡಿಕೊಡೊದಾಗಿ ಹಣ ಪಡೆದಿದ್ದ. ಇದ್ಯಾವುದೂ ಸಚಿವರಾಗಿದ್ದ ನಾಗೇಂದ್ರ ಗಮನಕ್ಕೆ ಬಂದಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅIಆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.