ನವದೆಹಲಿ: ದೆಹಲಿ ಮತ್ತು ಬೆಂಗಳೂರು ನಗರಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ವಿಮಾನಯಾನ ಸಂಸ್ಥೆ `ಇಂಡಿಗೋ’ ತನ್ನ ಪ್ರಯಾಣಿಕರಿಗೆ ಮಹತ್ವದ ಪ್ರವಾಸಿ ಸಲಹೆಯನ್ನು ನೀಡಿದೆ.
ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಆಗಮನ ಮತ್ತು ನಿರ್ಗಮನದಲ್ಲಿ ವಿಳಂಬವಾಗುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಪ್ರಯಾಣಿಕರು ಇಂಡಿಗೋ ಅಧಿಕೃತ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ತಮ್ಮ ವಿಮಾನದ ಸದ್ಯದ ಸ್ಥಿತಿಯನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಲು ಕೋರಲಾಗಿದೆ.
ಮಳೆಯ ಕಾರಣದಿಂದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿರಲಿದ್ದು, ವಿಮಾನ ನಿಲ್ದಾಣ ತಲುಪಲು ಹೆಚ್ಚಿನ ಸಮಯ ಬೇಕಾಗಬಹುದು. ಆದ್ದರಿಂದ ನಿಗದಿತ ಸಮಯಕ್ಕಿಂತ ಮೊದಲೇ ಮನೆಯಿಂದ ಹೊರಡುವಂತೆ ಸೂಚಿಸಲಾಗಿದೆ.