LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ತಾಂತ್ರಿಕ ದೋಷದಿಂದ ಇಂದು ನೇರಳೆ ಮಾರ್ಗದ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಚಲ್ಲಘಟ್ಟ-ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ-ವೈಟ್‍ಫೀಲ್ಡ್ ನಡುವೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ. ಹಸಿರು ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚರಿಸಲಿವೆ.

ಹಸಿರು ಮಾರ್ಗ ಪ್ರಯಾಣಿಕರಿಗೆ ಪೀಣ್ಯ ಹಾಗೂ ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರ ಜನವರಿ 26 ರಿಂದ ಜನವರಿ 28ರ ತನಕ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್‍ಸಿಎಲ್ ತಿಳಿಸಿತ್ತು. ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ ಎಂದು ಬಿಎಂಆರ್‍ಸಿಎಲ್ ಮಾಹಿತಿ ನಿಡಿದೆ.

ಮೆಟ್ರೋದ ಎರಡನೇ ಹಂತದ ಕಾಮಗಾರಿ ಕೂಡ ಸದ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ನಗರದ ಎಲ್ಲ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಆರ್‍ಸಿಎಲ್ ಚುರುಕಿನ ಕಾಮಗಾರಿ ನಡೆಸುತ್ತಿದೆ. ಇದರಡಿ ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗ ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಮಾದವಾರ ವರೆಗೆ ಮೆಟ್ರೋ ಸೇವೆ ದೊರೆಯಲಿದೆ.

ಮೆಟ್ರೋ ಸಂಚಾರ ಸ್ಥಗಿತಗೊಳ್ಳುವ ಕಾರಣ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸದ್ಯ ನಮ್ಮ ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆ ಬರೊಬ್ಬರಿ 6.5 ಲಕ್ಷ ಜನ ಸಂಚರಿಸುತ್ತಿದ್ದಾರೆ. ಈ ಪೈಕಿ 80 ಸಾವಿರದಿಂದ 1 ಲಕ್ಷ ಜನ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದಾರೆ. ಇದು ಟಿಕೆಟ್ ಕೌಂಟರ್‍ನ ಒತ್ತಡ ಕಡಿಮೆ ಆಗಲು ಕಾರಣವಾಗಿದೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು