LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣ

ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಮುಖಂಡ ವಿ.ಡಿ.ಸತೀಶನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಸತೀಶನ್ ಅವರು ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಕಳೆದ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದ ವಿ.ಡಿ.ಸತೀಶನ್ ಆರು ಬಾರಿ ಶಾಸಕರಾಗುವ ಮೂಲಕ ಕೇರಳ ವಿಧಾನಸಭೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನನಾಯಕನಾಗಿ ಹೆಸರು ಪಡೆದಿರುವ ಅವರು ಪರಊರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ 4ರಂದು ಕೇರಳ ರಾಜ್ಯದ ವಿಧಾನಸಭೆಯ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಪಕ್ಷದಲ್ಲಿ ಪೈಪೋಟಿಯಲ್ಲಿದ್ದರು. ಮುಖ್ಯಮಂತ್ರಿ ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರು 10 ದಿನಗಳಿಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದ್ದರು. ಇವರ ಜತೆ ಮುಖ್ಯಮಂತ್ರಿಯಾಗಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತೋರ್ವ ಪಕ್ಷದ ಹಿರಿಯ ಮುಖಂಡ ಮಾಜಿ ಗೃಹಸಚಿವ ರಮೇಶ್ ಚನ್ನಿತಲ ಪೈಪೋಟಿಯಲ್ಲಿದ್ದರು. ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ರೆಡ್ಡಿ, ಕೇರಳದ ಮಾಜಿ ಮುಖ್ಯಮಂತ್ರಿ ವಿಜಯನ್ ಪಿಣರಾಯ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ರಾಜೀವ್ ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 20 ಮಂದಿ ಶಾಸಕರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು