LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ತಾರಕಕ್ಕೇರಿದ ವಕೀಲರ-ಪೊಲೀಸರ ಮುಸುಕಿನ ಗುದ್ದಾಟ

ರಾಮನಗರ: ವಕೀಲರು ಮತ್ತು ಪೊಲೀಸರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ಕಳೆದೊಂದು ವಾರದಿಂದ ಕಾಂತಿಯುತವಾಗಿ ನಡೆಸುತ್ತಿದ್ದ ವಕೀಲರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿತು.

ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ತನ್ವಿರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ನೂರಾರು ವಕೀಲರು ಮೆರವಣಿಗೆ ಹೊರಟು ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಧರಣಿ ಕುಳಿತರು.

ವಕೀಲರ ಪ್ರತಿಭಟನೆ ನಡೆಯುತ್ತಿದ್ದರೆ, ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಊಟಕ್ಕೆ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳಿದ್ದಾರೆ.ನಾವು ಹಸಿದುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಅದೇಗೆ ಅವರು ಊಟ ಮಾಡುತ್ತಾರೆ. ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ವಕೀಲರು
ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಜಿಲ್ಲಾಧಿಕಾರಿ ಅವಿನಾಶ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಊಟ ಬಿಟ್ಟು ಪ್ರತಿಭಟನಾ ಸ್ಥಳಕ್ಕಾಗ ಮಿಸಿದರು.

ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದರೆ, ಡಿಸಿ ಹಾಗೂ ಎಸ್ಪಿ ತಪ್ಪಿಸ್ಥರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಹೇಳಿ ಜಾಣ ನಡೆ ಪ್ರದರ್ಶಿಸಲು ಮುಂದಾದರು. ಇದನ್ನು ಒಪ್ಪದ ನ್ಯಾಯವಾದಿಗಳು ಪಿಎಸ್‍ಐ ಅಮಾನತಿಗೆ ಪಟ್ಟು ಹಿಡಿದದರು.
ಆಗ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಂಜೆ 3 ಗಂಟೆವರೆಗೆ ಕಾಲಾವಕಾಶ ಕೇಳಿ ಹೋದವರು ವಾಪಸ್ ಬರಲೇ ಇಲ್ಲ, ಇದರಿಂದ ಮತ್ತಷ್ಟು ಕೋಪಗೊಂಡ ವಕೀಲರು ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಗಳನ್ನು ಮುಚ್ಚಿ ಜಿಲ್ಲಾಧಿಕಾರಿ, ಎಸ್ಪಿ ವಿರುದ್ದ ಕೂಗುತ್ತಾ ಅಹೋರಾತ್ರಿ ಹೋರಾಟ ಮುಂದುವರೆಸಿದರು.

ಇದಕ್ಕೂ ಮುನ್ನಾ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದ ವಕೀಲರು ಜಿಲ್ಲಾಡಳಿತ, ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಹರಿಯಾಯ್ದರು. ಬಳಿಕ ವಕೀಲರ ಪ್ರತಿಭಟನಾ ಮೆರವಣಿಗೆಗೆ ಚಾಲನೆ ದೊರಕಿತು.

ವೀವಾಂಟ್ ಜಸ್ಟೀಸ್: ಹರಿಹರ, ಮೈಸೂರು, ಮಂಡ್ಯ, ಹುಣಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ವಕೀಲರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ನ್ಯಾಯಾಲಯದ ಆವರಣದಿಂದ ಆರಂಭವಾದ ವಕೀಲರ ಮೆರವಣಿಗೆ ಬಿಸಿಲನ್ನು ಲೆಕ್ಕಿಸದೆ ನಗರದ ಐಜೂರು ಸರ್ಕಲ್, ಕೆಂಗಲ್ ಹನುಮಂತಯ್ಯ ಪ್ರತಿಮೆ ರಸ್ತೆ ಮುಖಾಂತರ, ಎ.ಜಿ.ರಸ್ತೆ ವಾಟರ್‍ಟ್ಯಾಂಕ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ವೇಳೆ ವೀ ವಾಂಟ್ ಜಸ್ಟಿಸ್, ನ್ಯಾಯವಾದಿಗಳಿಗೆ ನ್ಯಾಯಬೇಕಿದೆ ಎಂದು ಘೋಷಣೆ ಮೊಳಗಿಸಿದರು.

ಮಧ್ಯಾಹ್ನ 3 ಗಂಟೆ ವೇಳೆಗೆ ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣವನ್ನು ವಕೀಲರ ಮೆರವಣಿಗೆ ಪ್ರವೇಶಿಸಿತು. ಈ ವೇಳೆ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಊಟಕ್ಕೆಂದು ತೆರಳಿದ್ದು, ಪ್ರತಿಭಟನಾನಿರತರ ಆಕ್ರೋಶಕ್ಕೆ ಕಾರಣವಾಯಿತು. ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ, ನಮ್ಮ ಅಹವಾಲು ಕೇಳದಿದ್ದರೆ, ಡಿಸಿ ಕಚೇರಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು. ಆಗ ಜಿಲ್ಲಾಧಿಕಾರಿ ಅವಿನಾಶ್ ಮತ್ತು ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರ ಪ್ರತಿಭೆಈ ಮಾತುಗಳಿಂದ ತೃಪ್ತರಾಗದ ವಕೀಲರು ಜಿಲ್ಲಾಧಿಕಾರಿಗೆ 2 ಗಂಟೆಗಳ (ಸಂಜೆ5) ಡೆಡ್ಲೈನ್ ನೀಡುತ್ತೇವೆ. 2 ಗಂಟೆಯೊಳಗೆ ಒಂದು ನಿರ್ಧಾರಕ್ಕೆ ಬಂದು ಪಿಎಸ್‍ಐ ಸಸ್ಪೆಂಡ್ ಮಾಡಬೇಕು. ಜೊತೆಗೆ ಗೃಹ ಸಚಿವರೂ ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದು ಹೋರಾಟ ಮುಂದುವರೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು