LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ವೆಂಕಟೇಶಪ್ಪ

ಕೆಜಿಎಫ್: ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಗ್ರಾಮಗಳ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ಅಧಿಕಾರಿ ಎನ್. ವೆಂಕಟೇಶಪ್ಪ ತಿಳಿಸಿದರು.ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂದೋಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನೀರಿನ ಅದಾಲತ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಬೇಸಿಗೆಯ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದAತೆ ತಡೆಯಲು ಈಗಾಗಲೇ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಪಡಿಸಲಾಗಿದೆ. ಸಮರ್ಪಕ ನೀರಿನ ಸರಬರಾಜುಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎನ್. ವೆಂಕಟೇಶಪ್ಪ ಅವರು ಭರವಸೆ ನೀಡಿದರು.ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದು ಅವರು ಇದೇ ವೇಳೆ ತಿಳಿಸಿದರು.ಗ್ರಾಮಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಭೆಯಲ್ಲಿ ಪಿಡಿಒ ಮತ್ತು ಪಂಚಾಯಿತಿ ಸಿಬ್ಬಂದಿಗೆ ಗ್ರಾಮಗಳಲ್ಲಿ ರಾತ್ರಿ ವೇಳೆ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಲು
ಸೂಚನೆ ನೀಡಿದರು.ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣವಾಗಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳು ಸಭೆಯಲ್ಲಿ ಮನವಿ ಮಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದಲ್ಲಿ ಪೈಪ್‌ಲೈನ್ ಅಳವಡಿಸಲು ಎಲ್ಲ ರಸ್ತೆಗಳನ್ನು ಕತ್ತರಿಸಲಾಗಿದ್ದು, ಇದರಿಂದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವುದರಿAದ ಸಂಬAಧಪಟ್ಟ ಗುತ್ತಿಗೆದಾರರಿಂದ ತಕ್ಷಣವೇ ರಸ್ತೆಗಳನ್ನು ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ಗಂದೋಡಹಳ್ಳಿ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರಿಗೆ ಮನವಿ ಸಲ್ಲಿಸಿದರುಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗಾಗಿ ಮುಖ್ಯ ರಸ್ತೆ ಹಾಗೂ ಒಳರಸ್ತೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ಅಗೆಯಲಾಗಿದೆ. ಆದರೆ, ಪೈಪ್‌ಲೈನ್ ಅಳವಡಿಸಿದ ನಂತರ ಗುತ್ತಿಗೆದಾರರು ರಸ್ತೆಯನ್ನು ಮೊದಲಿನ ಸ್ಥಿತಿಗೆ ತರದೆ ಹಾಗೆಯೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯುದ್ದಕ್ಕೂ ಕಲ್ಲು-ಮಣ್ಣು ಹರಡಿಕೊಂಡಿದ್ದು, ಗುಂಡಿಗಳು ನಿರ್ಮಾಣವಾಗಿವೆ.ರಸ್ತೆಗಳು ಹಾಳಾಗಿರುವುದರಿಂದ ಪಾದಚಾರಿಗಳು, ಶಾಲಾ ಮಕ್ಕಳು ಮತ್ತು ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಮಳೆ ಬಂದರೆ ಈ ರಸ್ತೆಗಳು ಕೆಸರುಗದ್ದೆಯಂತಾಗಲಿದ್ದು, ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ. ಕಾಮಗಾರಿ ಮುಗಿದ ತಕ್ಷಣ ರಸ್ತೆ ಸರಿಪಡಿ
ಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದ್ದರೂ, ಅವರು ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರು, ಈ ಕುರಿತು ತಕ್ಷಣವೇ ಸಂಬAಧಪಟ್ಟ ಎಂಜಿನಿಯರ್ ಹಾಗೂ ಗುತ್ತಿಗೆದಾರರೊಂದಿಗೆ ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಎಸ್ ಡಿ ಎ ಸುನಿಲ್ ರೆಡ್ಡಿ, ಕರ ವಸುಲಿಗಾರ ವೆಂಕಟರಾಮಪ್ಪ ಸೇರಿದಂತೆ ಇತರರು ಹಾಗೂ ಗ್ರಾಮಸ್ಥರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು