LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹುರುಪಿನ ಮತದಾನ ಮಧ್ಯಾಹ್ನದ ವೇಳೆಗೆ ಸರಾಸರಿ ಶೇ. 40 ಮತದಾನ

ಬೆಂಗಳೂರು:  ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಮತದಾರರು ಹುರುಪಿನಿಂದ ಮತದಾರರು ಚಲಾಯಿಸುತ್ತಿದ್ದಾರೆ.
ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ 9.21% ಮತದಾನ ನಡೆದಿತ್ತು.

ಮಧ್ಯಾಹ್ನದ ವೇಳೆಗೆ ದಕ್ಷಿಣ ಕನ್ನಡದಲ್ಲಿ ಶೇ.40ಕ್ಕೂ ಹೆಚ್ಚು ಮತದಾನ ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿದೆ.ರಾಜ್ಯದ ಕೆಲವೆಡೆ ಇವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಲಾಯಿತು. ಕೆಲಕಡೆ ಸಣ್ಣಪುಟ್ಟ ಅಹಿತಕರ ಘಟನೆ ಹೊರತುಪಡೆಸಿದರೆ ಬಹುತೇಕ ಮತದಾನ ಶಾಂತಿಯುತವಾಗಿ ನಡೆದಿದ.

ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಬೆಂಗಳೂರಿನ ಕೆಲವೊಂದು ಕಡೆ ಇವಿಎಂನಲ್ಲಿ ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.ನಮಗೂ ಇದೊಂದು ಪರೀಕ್ಷೆ. ಈ ಬಾರಿ ಮತದಾನ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಜನತೆ ಬಂದು ಮತ ಹಾಕಬೇಕು ಎಂದು ತುಷಾರ್ ಗಿರಿನಾಥ್ ಕೈ ಮುಗಿದು ಮನವಿ ಮಾಡಿದರು.

ರಾಷ್ಟ್ರದ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆದಿದೆ. ಕೆಲ ಕಡೆ ಬಿಸಿಲನ್ನು ಲೆಕ್ಕಿಸಿದ ಮತದಾರರು ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದು ಕಂಡುಬಂತು.ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀ ನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಖಾಲಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶನ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು