LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೇರಳದ ಮೃತ ವ್ಯಕ್ತಿಗೆ ರಾಜ್ಯ ಸರ್ಕಾರದ ಪರಿಹಾರ ವಿಜಯೇಂದ್ರ ಟೀಕೆ

ಬೆಂಗಳೂರು: ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ.

ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ.ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೆ ಅರಣ್ಯ ಸಚಿವರು, ನಿಮ್ಮ (ರಾಹುಲ್ ಗಾಂಧಿ) ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ.

ಜೊತೆಗೆ ಈ ಬಗ್ಗೆ ಬೀದರ್‍ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೋ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದ್ದು ಈ ಹಿನ್ನಲೆಯಲ್ಲಿ ವಿಜಯೇಂದ್ರ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು