LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯಿಂದ ಜನರು ಮಾತ್ರವಲ್ಲ; ಜಾನುವಾರುಗಳೂ ಈ ಸರಕಾರಕ್ಕೆ ಶಾಪ ಹಾಕುತ್ತಿವೆ. ರಾಜ್ಯದ ರೈತರು, ಬಡವರ ಕೋಪವಷ್ಟೇ ಅಲ್ಲ, ಜಾನುವಾರುಗಳ ಕೋಪಕ್ಕೂ ಕೂಡ ರಾಜ್ಯ ಸರಕಾರ ಸಿಲುಕಿದೆ ಎಂದು ದೂರಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡುತ್ತಿದ್ದರು. ಅದರ ಪರಿಣಾಮವಾಗಿ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿದಿನ 80-85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಇಂದಿನ ಕಾಂಗ್ರೆಸ್ ಸರಕಾರವು ಹಾಲು ಉತ್ಪಾದಕ ರೈತರಿಗೆ 716 ಕೋಟಿ ಬಾಕಿ ಪ್ರೋತ್ಸಾಹಧನವನ್ನು ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಇದರ ಪರಿಣಾಮವಾಗಿ 10 ಲಕ್ಷ ಲೀಟರ್‍ನಷ್ಟು ಹಾಲು ಸಂಗ್ರಹಣೆ ಕುಂಠಿತಗೊಂಡಿದೆ ಎಂದರು.

ಕಾಂಗ್ರೆಸ್ ಪಕ್ಷದ ಹಿರಿಯರು ಬಿಜೆಪಿ ಬಗ್ಗೆ ಟೀಕಿಸುತ್ತಾರೆ; `ಮಾನ ಮರ್ಯಾದೆ ಇದ್ದರೆ..' ಎನ್ನುತ್ತಾರೆ. ನಾನು ಆ ಭಾಷೆ ಬಳಸುವುದಿಲ್ಲ. ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರೈತರ ದುಡ್ಡು ಉಳಿಸಿಕೊಂಡ ಪಾಪದ ಸರಕಾರ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರಕಾರ ಪ್ರತಿಬಾರಿ ತನ್ನ ಹೊಣೆಗಾರಿಕೆ ಮರೆತು ಕೇಂದ್ರ ಸರಕಾರವನ್ನು ತೋರಿಸುತ್ತಿದೆ. ಹಣಕಾಸು ವಿಚಾರ ಬಂದೊಡನೆ `ಮೋದಿಯವರು ಕೊಡುತ್ತಿಲ್ಲ; ಬಿಜೆಪಿಯವರಿಗೆ ಮಾನಮರ್ಯಾದೆ ಇದ್ದರೆ ಮೋದಿಯವರಿಗೆ ಮಾತನಾಡಲಿ' ಎನ್ನುವ ಮಾತು ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಂದ ಕೇಳುತ್ತಿದ್ದೇವೆ. ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಜನರು ಮತ್ತು ಜಾನುವಾರುಗಳು ಒಟ್ಟಿಗೆ ಸೇರಿ ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬರಲಿದೆ ಎಂದು ಎಚ್ಚರಿಸಿದರು.

ಗೌರವಾನ್ವಿತ ಮುಖ್ಯಮಂತ್ರಿಗಳು ಇವತ್ತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಮಾಹಿತಿ ಇದೆ. ರಾಜಸ್ವ ಸ್ವೀಕೃತಿ ಗುರಿ (ರೆವಿನ್ಯೂ ರಿಸೀಟ್) 2 ಲಕ್ಷ 38 ಸಾವಿರ ಕೋಟಿ ಇದ್ದು, ಡಿಸೆಂಬರ್ ಅಂತ್ಯಕ್ಕೆ 1 ಲಕ್ಷ 61 ಸಾವಿರ ಕೋಟಿ ರಾಜಸ್ವ ಮಾತ್ರ ಸ್ವೀಕಾರ ಆಗಿದೆ. ಕೇವಲ ಶೇ 67 ಇವರ ಸಾಧನೆ. ನಮ್ಮ ಸರಕಾರ ಇದ್ದಾಗ ಡಿಸೆಂಬರ್ ವೇಳೆಗೆ ಶೇ 82 ಗುರಿ ಸಾಧಿಸಿದ್ದೆವು. ಸಿಎಂ ಅವರಿಗೆ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಶೇ 82ರಿಂದ ಶೇ 67ಕ್ಕೆ ಇಳಿದುದಕ್ಕೆ ಮೋದಿಜೀ ಅವರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಯಾಕಾಗಿ ಗುರಿ ಮುಟ್ಟಲು ಸಾಧ್ಯವಾಗಿಲ್ಲ ಎಂದು ಜನರಿಗೆ ಉತ್ತರಿಸಿ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಜೀ ಅವರು, ಇದೇ 10ರಂದು ಬೆಂಗಳೂರಿಗೆ ಬರಲಿದ್ದಾರೆ. ಇಲ್ಲಿ ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್ ಸಭೆಯಲ್ಲಿ ಭಾಗವಹಿಸುತ್ತಾರೆ. ನಂತರ ಕೋರ್ ಕಮಿಟಿ ಸದಸ್ಯರ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸರಕಾರಿ ಕಾರ್ಯಕ್ರಮವೂ ಇದೆ ಎಂದು ಕೇಳಿದ್ದೇವೆ; ಸಂಜೆ 5 ಗಂಟೆಗೆ ಸುತ್ತೂರು ಜಾತ್ರೆಯಲ್ಲೂ ಪಾಲ್ಗೊಳ್ಳುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯದಲ್ಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. 28 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಯಾರೆಂದು ಬಿಜೆಪಿ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಸೂಕ್ತ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ಪ್ರೀತಂ ಗೌಡ, ಮತ್ತು ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು