LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. `ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ' ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವುದಾಗಿ ತಿಳಿಸಿದರು.

ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅತ್ಯಂತ ಹೆಚ್ಚು ತೆರಿಗೆಯನ್ನು ಅದು ಸಂಗ್ರಹ ಮಾಡುತ್ತದೆ. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಿದೆ. ಆದರೆ, ಅದರ ಅರ್ಥ ರಾಜ್ಯದಲ್ಲಿ ಅಭಿವೃದ್ಧಿ ಮಾಡಬಾರದು ಎಂದಲ್ಲ ಎಂದು ತಿಳಿಸಿದರು.

ನಾವು ಶಾಸಕರು ಕ್ಷೇತ್ರಕ್ಕೆ ಹೋದಾಗ ರಸ್ತೆಗಳು, ಶಾಲಾ ಕೊಠಡಿ, ಆಸ್ಪತ್ರೆಗಳ ಬಗ್ಗೆ ಜನರು ನಮ್ಮನ್ನು ಕೇಳುತ್ತಾರೆ. ಆದರೆ, 224 ಕ್ಷೇತ್ರಗಳ ಯಾವುದೇ ಒಬ್ಬ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ವಿಚಾರದಲ್ಲಿ ಮಾತನಾಡಲು ಸಾಧ್ಯವೇ ಇಲ್ಲ. ಯಾಕೆಂದರೆ, ರಾಜ್ಯ ಸರಕಾರ ಒಂದು ರೂಪಾಯಿಯನ್ನೂ ಅನುದಾನವಾಗಿ ಕೊಡುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರಕಾರವು ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಒಂದು ರೂಪಾಯಿ ಅನುದಾನವನ್ನೂ ಕೊಡುತ್ತಿಲ್ಲ ಎಂದು ಟೀಕಿಸಿದರು. ಸರಕಾರಿ ನೌಕರರಿಗೆ ಸಂಬಳ ಕೊಡತಕ್ಕಂಥ ಸಾಧ್ಯತೆ ಕಡಿಮೆ ಆಗುತ್ತಿದೆ. ಅಂಥ ದಾರುಣ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು