LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕುಪೇಂದ್ರ ರೆಡ್ಡಿ ಗೆಲುವಿಗೆ ಕಾರ್ಯತಂತ್ರ: ವಿಜಯೇಂದ್ರ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರಗಳು ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎನ್‍ಡಿಎ ಕೂಟಕ್ಕೆ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ. ನಿನ್ನೆ ನಮ್ಮ ಕೇಂದ್ರದ ವರಿಷ್ಠರು ಮತ್ತು ಜೆಡಿಎಸ್ ನ ರಾಜ್ಯದ ಹಿರಿಯರು ಚರ್ಚೆ ಮಾಡಿ ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ್ದಾಗಿ ವಿವರಿಸಿದರು. ಬಿಜೆಪಿ- ಜೆಡಿಎಸ್ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲುವ ದೃಷ್ಟಿಯಿಂದ ತಂತ್ರಗಾರಿಕೆಯನ್ನು ಮುಂದಿನ ದಿನಗಳಲ್ಲಿ ರೂಪಿಸಲಿದ್ದೇವೆ ಎಂದರು.

ಬೇಕಾದ ಹೆಚ್ಚುವರಿ ಮತಗಳ ಕುರಿತು ಚರ್ಚಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯನವರಿಂದ ಬಜೆಟ್ ಮೂಲಕ ಏನನ್ನು ನಿರೀಕ್ಷಿಸಲು ಸಾಧ್ಯ ಎಂಬುದು ತಮಗೇ ಗೊತ್ತಿದೆ. ಖಜಾನೆ ಖಾಲಿ ಮಾಡಿಕೊಂಡು ಯಾವುದೇ ಅಭಿವೃದ್ಧಿ ಮಾಡದೆ ಇರುವ ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ದೆಹಲಿಯಲ್ಲಿ ಹೋಗಿ ನಾಟಕ ಮಾಡಿತ್ತು.

ನಾಳೆ ಅವರು ಮಂಡಿಸುವ ಬಜೆಟ್ ಬಗ್ಗೆ ಜನರೂ ನಿರೀಕ್ಷೆ ಇಟ್ಟುಕೊಂಡಿಲ್ಲ. ನಮ್ಮಲ್ಲೂ ಸಹ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ರಾಜ್ಯದ ಹಿತದೃಷ್ಟಿಗಾಗಿ ಉತ್ತಮ ಬಜೆಟ್ ಕೊಡಬಹುದೆಂಬ ಅಪೇಕ್ಷೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು