LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಜಯೇಂದ್ರರಿಂದ ಅಸಮಾಧಾನಿತರ ಮನವೊಲಿಕೆ ಯತ್ನ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ ಇಂದು ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ.

ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ.

ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡ್ತೇನೆ ಅಂತ ಹೇಳಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.
ಅವರಿಗೂ ಕೆಲವು ಸಣ್ಣಪುಟ್ಟ ಅಸಮಧಾನ ಇದ್ದವು. ಅದರ ಬಗ್ಗೆ ಮಾತಾಡಿದ್ದಾರೆ. ಇವತ್ತು ಭೇಟಿ ಮಾಡಿ ಮಾತನಾಡಿದ್ದೇನೆ. ಅವರ ಹಲವು ವಿಚಾರ ಮಾತನಾಡಿದ್ದಾರೆ. ವರಿಷ್ಠರು ನಿಮಗೆ ರಾಜ್ಯಧ್ಯಕ್ಷ ಸ್ಥಾನ ನೀಡಿದ್ದಾರೆ. ಇದರ ಬಗ್ಗೆ ಅಸಮಾಧಾನ ಇಲ್ಲ ಅಂದಿದ್ದಾರೆ. ಮೋದಿ ಕೈಬಲಪಡಿಸಬೇಕು ಎಂದಿದ್ದಾರೆ. ಪಕ್ಷದ ಹಿರಿಯರು ಏನೇ ಹೇಳಿಕೆ ನೀಡಿದರೂ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತೇನೆ ಎಂದು ತಿಳಿಸಿದರು.

ನಾನು ಮಾತನಾಡಬಾರದು, ನನ್ನ ಕೆಲಸ ಮಾತನಾಡಬೇಕು. ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕೆಲಸ ಮಾಡುತ್ತೇನೆ. ರಾಷ್ಟ್ರೀಯ ನಾಯಕರು ಜವಾಬ್ದಾರಿ ನೀಡಿದ್ದಾರೆ. ಕೆಲವರ ಅಭಿಪ್ರಾಯ ಬೇರೆ ಇರುತ್ತೆ. ಎಲ್ಲವನ್ನೂ ಸರಿಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು