ಬಂಗಾರಪೇಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಕ್ಟೋಬರ್ 1ರಂದು ಬಂಗಾರಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ವಿ ಮಹೇಶ್ ತಿಳಿಸಿದ್ದಾರೆ.
ಬಂಗಾರಪೇಟೆ ನಗರಕ್ಕೆ ಆಗಮಿಸಿದ ಬಳಿಕ ಕುಲಕುಂಭ ಗ್ರಾಮದ ಬಳಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ. ಅಲ್ಲಿಂದ ಸುಮಾರು ಒಂದು ಕಿ.ಮೀ. ದೂರದಲ್ಲಿರುವ ಹಾರಾಲ ಕಲ್ಯಾಣ ಮಂಟಪಕ್ಕೆ ತೆರಳಲಿದ್ದು, ಅಲ್ಲಿ ಪಕ್ಷದ ಹಿರಿಯ ಮುಖಂಡರು, ವಿವಿಧ ಹಂತಗಳಲ್ಲಿ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಮಾವೇಶ ನಡೆಯಲಿದೆ.ಸುಮಾರು ಎರಡು ಗಂಟೆಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಪಂಚಾಯಿತಿ ಸದಸ್ಯರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಹಂತದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.
ಸಮಾವೇಶದ ಬಳಿಕ ಬಂಗಾರಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಮತ್ತೊಂದು ಕಾರ್ಯಕ್ರಮ ನಡೆಯಲಿದ್ದು, ಒಟ್ಟಾರೆ ಮಧ್ಯಾಹ್ನ 2ರಿಂದ 3 ಗಂಟೆಯೊಳಗೆ ಕಾರ್ಯಕ್ರಮಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬಳಿಕ ವಿಜಯೇಂದ್ರ ಅವರು ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊAದಿಗೆ ಸಂವಾದ ನಡೆಸಿ ಸಂಘಟನೆಯ ಸ್ಥಿತಿಗತಿ ಕುರಿತು ಮಾಹಿತಿ ಪಡೆಯುವುದು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವುದು ಮತ್ತು ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವುದು ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಮುಖಂಡರು ಹೇಳಿದರು.ಮೊದಲ ಹಂತದ ಪ್ರವಾಸದಲ್ಲಿ ಪ್ರತಿ ಜಿಲ್ಲೆಯಿಂದ ಎರಡು ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಕೋಲಾರ ಜಿಲ್ಲೆಯಲ್ಲಿ ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರಗಳನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಮನವಿ ಮಾಡಿದರು.ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪ್ರವಾಸದಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ. ಬಂಗಾರಪೇಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಈ ಮೂಲಕ ಬಂಗಾರಪೇಟೆಯಲ್ಲಿ ಪಕ್ಷದ ಸಂಘಟನೆಯ ಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಮುಖಂಡರು ಕರೆ ನೀಡಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸಂಪAಗಿ ನಿಕಟ ಪೂರ್ವ ಅಧ್ಯಕ್ಷ ಮರ್ಕೊಂಡೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉನಕುಂದ ವೆಂಕಟೇಶ್, ಟಿಎಫ್‌ಎಂಎಸ್ ಸದಸ್ಯರಾದ ಹುಣಸನಹಳ್ಳಿ ಶ್ರೀನಿವಾಸ್, ರಾಮಣ್ಣ, ಚೌಡಪ್ಪ ಇದ್ದರು.