LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನೆಲವಾಗಿಲಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಹೊಸಕೋಟೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನ ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ವಲಯದ ಸಹಾಯಕ ವ್ಯವಸ್ಥಾಪಕ ಮೋಹನ್ ಕುಮಾರ್ ತಿಳಿಸಿದರು.

ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಯೋಜನೆಗಳನ್ನ ರೂಪಿಸಿದೆ. ಈ ಯೋಜನೆಗಳನ್ನ ಪಡೆದಂತಹ ಫಲಾನುಭವಿಗಳ ಜೊತೆ ಸಂವಾದ ಹಾಗೂ ಪಡೆಯದೆ ಇರುವಂತಹ ಫಲಾನುಭವಿಗಳಿಗೂ ಸಹ ಯೋಜನೆಗಳನ್ನು ತಲುಪಿಸಬೇಕು ಎನ್ನುವ ದೃಷ್ಟಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ರೂಪಿಸಿದೆ.

ಈ ಕಾರ್ಯಕ್ರಮದ ಮೂಲಕ ಫಲಾನುಭವಿಗಳ ಜೊತೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ಮಾಡುವ ಕಾರ್ಯಕ್ರಮ ಇದಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳು ಪ್ರತಿಯೊಂದು ಮನೆಗೂ ಕೂಡ ತಲುಪಿಸಬೇಕು ಎನ್ನುವ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ಕನಸನ್ನ ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕುಗಳ ಮೂಲಕ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.

ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಕ್ರಮ: ಪ್ರಮುಖವಾಗಿ ಮುದ್ರಾ ಯೋಜನೆ, ಜನಧನ್ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸನ್ಮಾನ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನ ಎಲ್‍ಇಡಿ ಪರದೆಯ ವಾಹನದೊಂದಿಗೆ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕೆನರಾ ಬ್ಯಾಂಕ್ ರೀಜನಲ್ ಸಹಾಯಕ ವ್ಯವಸ್ಥಾಪಕ ಮೋಹನ್ ಕುಮಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಉದ್ಯಮಶೀಲತೆ, ಕೌಶಲ್ಯಾಭಿವೃದ್ದಿ, ಎಲೆಕ್ಟ್ರಾನಿಕ್ ಮತ್ತು ಟೆಕ್ನಾಲಜಿ ಇಲಾಖಾ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಭಾಗಿಯಾಗಿದ್ದರು.ನವದೆಹಲಿಯಿಂದ ನೇರಪ್ರಸಾರ ಆದಂತಹ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮವನ್ನು ಸಾರ್ವಜನಿಕರು ವೀಕ್ಷಿಸಲು ಬೃಹದಾಕಾರದ ಎಲ್‍ಇಡಿ ಪರದೆಯನ್ನು ಅಳವಡಿಸಲಾಗಿತ್ತು.

ಕೇಂದ್ರ ಸಚಿವ ರಾಜಿವ್ ಚಂದ್ರಶೇಖರ್ ಅವರು ಸಾರ್ವಜನಿಕರ ಜೊತೆಯಲ್ಲೆ ಕುಳಿತು ನರೇಂದ್ರ ಮೋದಿಯವರ ಸಂವಾದ ಕಾರ್ಯಕ್ರಮವನ್ನು ಸುಮಾರು 30 ನಿಮಿಷಗಳ ಕಾಲ ವೀಕ್ಷಣೆ ಮಾಡಿದರು. ನಂತರ ಆಯೋಜಕರಿಂದ ಗೌರವ ಸಮರ್ಪಣೆಯನ್ನು ಸ್ವೀಕರಿಸಿ ಕಾರ್ಯಕ್ರಮದ ಯಶಸ್ವಿಗೆ ಶುಭಾಶಯ ಕೋರಿದರು.ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ಹಾಗೂ 2024ರ ದಿನದರ್ಶಿಯನ್ನು ವಿತರಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು