LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಖಳನಟ ಹರಿಶ್ ರಾಯ್ ನಿಧನ"

ಬೆಂಗಳೂರು:ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನರಾಗಿದ್ದಾರೆ. `ಓಂ', `ನಲ್ಲ' ಸೇರಿದಂತೆ `ಕೆಜಿಎಫ್', `ಕೆಜಿಎಫ್ ೨' ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ವಿಧಿವಶರಾಗಿದ್ದಾರೆ. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.

ಹಲವಾರು ಮಂದಿ ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಹಲವು ಯೂಟ್ಯೂಬರ್‌ಗಳು ಸಹ ಹೋಗಿದ್ದರು. ಕಳೆದ ಕೆಲ ತಿಂಗಳುಗಳಿAದಲೂ ಸತತವಾಗಿ ಚಿಕಿತ್ಸೆಯನ್ನು ಪಡೆಯುತ್ತಲೇ ಇದ್ದರು ಹರೀಶ್ ರಾಯ್. ಇದೀಗ ಕೊನೆಗೆ ನಿಧನ ಹೊಂದಿದ್ದಾರೆ.
ಕರಾವಳಿ ಮೂಲಕ ಹರೀಶ್ ರಾಯ್ ಅವರು ೯೦ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್‌ವುಡ್‌ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ ೧ ಹಾಗೂ ಕೆಜಿಎಫ್ ಚಾಪ್ಟರ್ ೨ ನಲ್ಲಿ ಅಭಿನಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು