LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಯೋಗೇಶ್‌ಗೌಡ ಕೊಲೆ ಪ್ರಕರಣ ವಿನಯ್ ಕುಲಕರ್ಣಿಗೆ ಜಾಮೀನು

ಬೆಂಗಳೂರು: ಧಾರವಾಡದ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಾಸಕ ವಿನಯ್‌ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ರಾಜ್ಯ ಹೈಕೋರ್ಟ್ ಇಂದು ಈ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳಾ ಮಹಮ್ಮದ್ ನವಾಜ್ ಹಾಗೂ ಬಸವರಾಜ್ ಅವರಿದ್ದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ. ಇದೇ ಸಂದರ್ಭದಲ್ಲಿ ವಿನಯ್‌ಕುಲಕರ್ಣಿಯವರನ್ನು ದೋಷಿ ಎಂದು ಪರಿಗಣಿಸಲಾಗಿದ್ದ ತೀರ್ಪಿಗು ತಡೆಯಾಜ್ಞೆ ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಅಮಾನತಿನಲ್ಲಿಟ್ಟಿದೆ. ಜಾಮೀನು ಮಂಜೂರು ಮಾಡಿರುವ ನ್ಯಾಯಧೀಶರು 5ಲಕ್ಷ ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ಒದಗಿಸಬೇಕು. ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ ಎಂದು ತೀರ್ಪಿನಲ್ಲಿ ಸೂಚಿಸಿದ್ದಾರೆ. ಒಟ್ಟು 17 ಮಂದಿಗೆ ಶಿಕ್ಷೆ ಪ್ರಕಟಿಸಿತ್ತಾದರೂ ಇದೀಗ ವಿನಯ್‌ಕುಲಕರ್ಣಿಯವರೊಟ್ಟಿಗೆ ದೋಷಿ ಎಂದು ಪರಿಗಣಿಸಲಾಗಿದ್ದ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ಮಂಜೂರಾಗಿರುವ ಕಾರಣ ವಿನಯ್‌ಕುಲಕಣಿ ಅವರ ಶಾಸಕತ್ವ ಇದೀಗ ಮುಂದುವರಿಯಲಿದೆ.
2016ರ ಜೂನ್ 15ರಂದು ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿದ್ದು, ತನಿಖೆ ನಡೆದಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೊಲೆ ಮತ್ತು ಕ್ರಿಮಿನಲ್ ಸಂಚು ಆರೋಪಗಳು ಸಾಬೀತಾಗಿವೆ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ 2026ರ ಏಪ್ರಿಲ್ 17ರಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಸಾಕ್ಷ÷್ಯ ನಾಶಕ್ಕೆ ಸಂಬಂಧಿಸಿದಂತೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡವನ್ನೂ ವಿಧಿಸಿತ್ತು. ದಂಡದ ಮೊತ್ತದಿಂದ ಸಂತ್ರಸ್ತ ಯೋಗೀಶ್ ಗೌಡ ಅವರ ಮಕ್ಕಳು ಮತ್ತು ಸಹೋದರರಿಗೆ ಒಟ್ಟು 16 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು