LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕ್ರಮ ವಹಿಸಿ: ವಿನೋತ್ ಪ್ರಿಯಾ

ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಆಗಿರುವ ಆರ್. ವಿನೋತ್ ಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಪಂಚಾಯತ್ ಲಿಂಕ್ ಡಾಕುಮೆಂಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಉಸ್ತುವಾರಿಗಾಗಿ ನೇಮಕವಾಗಿರುವ ನೋಡಲ್ ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು ಕುಡಿಯುವ ನೀರಿನ ಬವಣೆ ನೀಗಿಸಲು ಅಗತ್ಯವಿರುವ ಎಲ್ಲ ಕ್ರಮಗಳಿಗೆ ಮುಂದಾಗಬೇಕು. ಅಗತ್ಯವಿರುವೆಡೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಬೇಕು. ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವೆಚ್ಚ ವಿವರ ದಾಖಲಿಸಲು ಪಾರದರ್ಶಕ ಕ್ರಮ ಅನುಸರಿಸಬೇಕು. ಸಮರ್ಪಕ ನೀರು ಪೂರೈಕೆ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿ ಮಾಡಬೇಕು. ನೋಡೆಲ್ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸೂಚಿಸಿದರು.ಚಾಮರಾಜನಗರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಟಿ. ನರಸೀಪುರದಿಂದ ಪೂರೈಕೆಯಾಗುತ್ತಿರುವ ಮಾರ್ಗಮಧ್ಯೆ ಕೆಲವು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಅಡಿ ತ್ವರಿತವಾಗಿ ನೀರು ಒದಗಿಸುವ ಕಾರ್ಯ ಶೀಘ್ರ ಅನುಷ್ಠಾನವಾಗಬೇಕು. ಇದರಿಂದ ಚಾಮರಾಜನಗರ ಪಟ್ಟಣಕ್ಕೆ ನೀರು ಸಮರ್ಪಕವಾಗಿ ಸರಬರಾಜು ಆಗಲು ಸಾಧ್ಯವಾಗಲಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸದಿದ್ದರೆ ಟ್ಯಾಂಕರ್‌ಗಳ ಮೂಲಕ ಪೂರೈಸುವ ನೀರಿನ ವೆಚ್ಚ ಭರಿಸುವಂತೆ ಸಂಬAಧಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹೆಚ್ಚಿನ ಸುಧಾರಣೆಯಾಗಬೇಕು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಅನುತ್ತೀರ್ಣತೆ ಇರಬಾರದು. ಫಲಿತಾಂಶದಲ್ಲಿ ಹೆಚ್ಚಳ ಕಾಣಬೇಕು. ಶೇ. 100ರಷ್ಟು ಫಲಿತಾಂಶಕ್ಕಾಗಿ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ್ನು ಗುರುತಿಸಿ ಕೇಂದ್ರಿಕರಿಸಿ ಹೊಸಹೊಸ ಕಲಿಕಾ ವಿಧಾನಗಳು, ಕಾರ್ಯಾಗಾರಗಳನ್ನು ಆಯೋಜಿಸಬೇಕು. ಶಾಲೆಗಳಲ್ಲಿ ಮಕ್ಕಳ ಪ್ರತಿನಿತ್ಯದ ಹಾಜರಾತಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದು, ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಮನೆಗೋಡೆಗಳು ಕುಸಿಯದಂತೆ ಮನೆಯ ಸ್ಥಿತಿಗತಿಗಳನ್ನು ಗಮನಿಸಬೇಕು. ಮಳೆನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಪಂಚಾಯಿತಿ ಅಧಿಕಾರಿಗಳು ಆಯಾ ಗ್ರಾಮಗಳಲ್ಲಿ ಚರಂಡಿಗಳಲ್ಲಿ ಹೂಳು ತುಂಬಿ ಕಟ್ಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮಸ್ಯೆ ಉದ್ಭವಿಸಿದರೆ ಸಂಬAಧಪಟ್ಟ ತಹಸೀಲ್ದಾರರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದರು.
ಜಿಲ್ಲೆಯ ಮೆಟ್ರಿಕ್ ಪೂರ್ವ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು. ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟಲ್‌ಗಳಲ್ಲಿ ಮಕ್ಕಳ ಗೈರುಹಾಜರಿ ಗಮನಿಸಲಾಗಿದೆ. ಇದರ ಪರಿಹಾರಕ್ಕಾಗಿ ಅಧಿಕಾರಿಗಳು ಕ್ಷೇತ್ರಪ್ರವಾಸ ಕೈಗೊಳ್ಳಬೇಕು. ಮಕ್ಕಳ ಪೋಷಕರಿಗೆ ತಿಳಿವಳಿಕೆ ನೀಡಬೇಕು ಎಂದರು.ಜಿಲ್ಲಾಮಟ್ಟದ ಅಧಿಕಾರಿಗಳು 2026-27ನೇ ಸಾಲಿನ ಅನುದಾನಕ್ಕಾಗಿ ಕ್ರಿಯಾಯೋಜನೆ ಸಿದ್ದಪಡಿಸಿ ಶೀಘ್ರವಾಗಿ ಸಲ್ಲಿಸಬೇಕು. ಯಾವುದೇ ವಿಳಂಬಕ್ಕೆ, ತಿದ್ದುಪಡಿಗೆ ಅವಕಾಶವಾಗದಂತೆ ಕ್ರಿಯಾಯೋಜನೆ ಪರಿಶೀಲಿಸಿ ಸಿದ್ದಪಡಿಸಬೇಕು. ಏನಾದರೂ ಬದಲಾವಣೆ ಇದ್ದಲ್ಲಿ ಸರಿಪಡಿಸಿ ಜೂನ್ ಮಾಹೆಯ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್. ವಿನೋತ್ ಪ್ರಿಯಾ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು