ಹಾವೇರಿ: ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂಪಾಯಿ ದಂಡ ವಿಧಿಸಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಹುಣಸಿಕಟ್ಟಿ ಬಳಿಯ ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ 6 ತಿಂಗಳ ಗಡುವು ನೀಡಿ ಇಲಾಖೆಯಿಂದ ನೋಟಿಸ್ ನೀಡಲಾಗಿದ್ದು, 3 ಕಂತುಗಳಲ್ಲಿ ದಂಡ ಪಾವತಿಸುವಂತೆ ಇಲಾಖೆ ತಿಳಿಸಿದೆ.
ಜಾಗ ಒತ್ತುವರಿ ಮಾಡಿ ಕಲ್ಲು ತೆಗೆದು ನಿಯಮ ಉಲ್ಲಂಘನೆ ಆರೋಪ ಸಂಬಧ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್‌ಗಳ ಕೇಂದ್ರ ಡ್ರೋಣ್ ಮೂಲಕ ಸಮೀಕ್ಷೆ ನಡೆಸಿತ್ತು. ಈ ವೇಳೆ ಪರವಾನಿಗೆ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬAದ ಹಿನ್ನೆಲೆ ಹಾವೇರಿ ಜಿಲ್ಲೆಯ 60ಕ್ಕೂ ಹೆಚ್ಚು ಕಲ್ಲು ಕ್ವಾರಿ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಈ ಪೈಕಿ ಸಚಿವ ರುದ್ರಪ್ಪ ಲಮಾಣಿ ಅವರೂ ಸೇರಿದ್ದಾರೆ ಎನ್ನಲಾಗಿದೆ.
ಇನ್ನು ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಸಂಬAಧ ಸಚಿವರಿಗೇ ದಂಡ ವಿಧಿಸಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಜಿಲ್ಲಾ ಕ್ರಷರ್ ಮತ್ತು ಕ್ವಾರಿ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಬೆಳವಡಿ, ಸಚಿವ ರುದ್ರಪ್ಪ ಲಮಾಣಿಯವರಿಗೆ 3 ಕೋಟಿ ದಂಡ ಬಂದಿದೆ. ಅವರು ಮಂತ್ರಿಯಾಗಿ ಈ ಬಗ್ಗೆ ಸಿಎಂ ಬಳಿ ಮಾತಾಡೋಕೆ ಧೈರ್ಯ ಇಲ್ಲ. ನಾವೆಲ್ಲ ಹೋರಾಟ ಮಾಡಿದರಷ್ಟೇ ಅವರೂ ಬಯಲಿಗೆ ಬರ್ತಾರೆ. ಹೇ ಹೋಗಯ್ಯಾ ದಂಡ ತುಂಬು, ಹೋಗು ನಿನಗೇನು ಕಡಿಮೆ ಆಗಿದೆ ಅಂತಾರೆ. ಇದು ತಪುö್ಪ ಎಂದು ಅವರೂ ಒಪ್ಪಿಕೊಂಡಿದ್ದಾರೆ ಎಂದವರು ತಿಳಿಸಿದ್ದಾರೆ.