LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅತೃಪ್ತರ ಮನವೊಲಿಕೆಗೆ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ

ಬೆಂಗಳೂರು: ಲೋಕಸಭಾ ಚುನಾವಣಾ ಸಂಬಂಧ ಈಗಾಗಲೇ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿರುವ ಭಾರತೀಯ ಜನತಾಪಾರ್ಟಿಯಲ್ಲಿ ಟಿಕೆಟ್ ಸಿಗದೆ ಅತೃಪ್ತರಾಗಿರುವವರ ಮನವೊಲಿಕೆಗೆ ಬಿರುಸಿನ ಚಟುವಟಿಕೆಗಳು ನಡೆದಿವೆ.

ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಪುತ್ರನಿಗೆ ದೊರೆಯಲಿಲ್ಲ ಎಂದು ಮುನಿಸಿಕೊಂಡಿರುವ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಮನವೊಲಿಸಿ ಅವರ ಅತೃಪ್ತಿಯನ್ನು ಶಮನಗೊಳಿಸಲು ಖುದ್ದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ತಮ್ಮ ಜಿಲ್ಲೆಯವರೇ ಆದ ಪಕ್ಷದ ಮತ್ತೋರ್ವ ಹಿರಿಯ ಮುಖಂಡ ಮಾಜಿ ಸಚಿವ ಅರಗಜ್ಞಾನೇಂದ್ರ ಅವರಿಗೆ ಈಶ್ವರಪ್ಪ ಮನವೊಲಿಸುವ ಜವಾಬ್ದಾರಿ ನೀಡಿದ್ದಾರೆ ಎಂದುಹೇಳಲಾಗುತ್ತಿದೆ.ಇಂದು ಸಂಜೆ ಈಶ್ವರಪ್ಪ ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತೀರ್ಮಾನಕೈಗೊಳ್ಳಲಿದ್ದು, ಆ ಸಭೆ ಆರಂಭಕ್ಕೂ ಮುನ್ನ ಈಶ್ವರಪ್ಪ ಮನವೊಲಿಸುವ ಕಾರ್ಯವಾಗಬೇಕು ಎಂದು ಜ್ಞಾನೇಂದ್ರ ಅವರಿಗೆ ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೋರ್ವ ಟಿಕೆಟ್ ವಂಚಿತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸಹ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ತಮಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಈ ಎಲ್ಲದರ ಮಧ್ಯೆ ಅರುಣ್ ಪುತ್ತಿಲ ಅವರು ಸಹ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಮರು ಸೇರ್ಪಡೆಗೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಪುತ್ತಿಲ ಅವರ ಭೇಟಿ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಪ್ರಮುಖ ಪದಾಧಿಕಾರಿಯಾಗಿರುವ ಸುನೀಲ್ ಕುಮಾರ್ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಉಪಸ್ಥಿತರಿದ್ದರು ಎನ್ನಲಾಗಿದೆ.

ಯಡಿಯೂರಪ್ಪರ ನಿವಾಸದ ಬಳಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್‍ಕುಮಾರ್ ಮಾತನಾಡಿ, ಪುತ್ತಿಲ ಪರಿವಾರ ಮೋದಿ ಪರಿವಾರದ ಜೊತೆಗೆ ಇರಬೇಕೆಂದು ನಿಶ್ಚಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಅಭ್ಯರ್ಥಿಯ ಗೆಲುವುಗಾಗಿ ಶ್ರಮಿಸುತ್ತಾರೆ. ಇಂದು ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಮಾತುಕತೆ ಆಗಿ, ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷ ಸೂಕ್ತವಾದ ಸ್ಥಾನಮಾನ ನೀಡಲಿದೆ ಎಂದಿದ್ದಾರೆ.

ಪುತ್ತಿಲ ಪರಿವಾರ ಹಾಗೂ ಮೋದಿ ಪರಿವಾರ ಒಟ್ಟಿಗೆ ಕೆಲಸ ಕಾರ್ಯ ಮಾಡಲಿದೆ ಎಂದಿರುವ ಪುತ್ತಿಲ ಅವರು, ಅಭ್ಯರ್ಥಿಯ ಗೆಲುವಿಗಾಗಿ ಶ್ರಮವಹಿಸುತ್ತೇವೆ. ದಕ್ಷಿಣ ಕನ್ನಡ ಅಭ್ಯರ್ಥಿಯನ್ನು ದೊಡ್ಡ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು