LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸೂಲಿಬೆಲೆಗೆ ಭೇಟಿ ನೀಡಿ ಬರ ವೀಕ್ಷಣೆ

ಹೊಸಕೋಟೆ: ತಾಲೂಕಿನ ಸೂಲಿಬೆಲೆಗೆ ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬರ ಪರಿಸ್ಥಿತಿಯ ವೀಕ್ಷಿಸಲಾಯಿತು.ಸಚಿವರು ಶಾಸಕ ಶರತ್ ಬಚ್ಚೇಗೌಡ, ಜಿಲ್ಲಾಧಿಕಾರಿಗಳೊಂದಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆಯ ಅಭಾವದಿಂದ ಕೃಷಿಕರು ಬೆಳೆದಿರುವ ರಾಗಿ ಬೆಳೆಗಳನ್ನು ಸಚಿವರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ವಿವರಿಸಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ ತಾಲೂಕಿನಲ್ಲಿ ಒಟ್ಟು 9400 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಭಿತ್ತನೆ ಮಾಡಿದ್ದು ಇದರಲ್ಲಿ 8,680 ಹೆಕ್ಟೇರ್ ಪ್ರದೇಶವು ಮಳೆಯ ಅಭಾವದಿಂದ ಹಾನಿಗೊಳಗಾಗಿದೆ. ತಾಲೂಕಿಗೆ ಶಾಶ್ವತ ನೀರಾವರಿ ವ್ಯವಸ್ಥೆಯಿಲ್ಲದ ಕಾರಣ ಕೆಸಿ ವ್ಯಾಲಿ, ಎಚ್‍ಎನ್ ವ್ಯಾಲಿ ಒಳಗೊಂಡಂತೆ ಇದೀಗ ಕೃಷ್ಣರಾಜಪುರದ ವೆಂಗಯ್ಯನ ಕೆರೆಯ ನೀರನ್ನು ಸಂಸ್ಕರಿಸಿ ತಾಲೂಕಿನ ಕೆರೆಗಳಿಗೆ ಹರಿಯಲು ಕ್ರಮ ಕೈಗೊಳ್ಳಲಾಗಿದೆ.

ಇದರಿಂದ ತೋಟಗಾರಿಕೆ ಬೆಳೆಗಳು, ಹೂ ಬೆಳೆಯುವ ರೈತರ ಕೊಳವೆಬಾವಿಗಳ ಅಂತರ್ಜಲ ಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ. ಸರಕಾರದ ಯೋಜನೆಗಳನ್ನು ರೈತರು ಸಮರ್ಪಕವಾಗಿ ಪಡೆದುಕೊಳ್ಳಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮಾಂತರ ಜಿಲ್ಲಾಧಿಕಾರಿ ಡಾ: ಎನ್.ಶಿವಶಂಕರ್ ಜಿಲ್ಲೆಯಲ್ಲಿ 49 ಸಾವಿರ ಹೆಕ್ಟೇರ್‍ನಷ್ಟು ಜಮೀನು ಬರಪೀಡಿತವಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ, ಉಪನಿರ್ದೇಶಕಿ ಗಾಯತ್ರಿ, ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧಾ. ತಹಶೀಲ್ದಾರ್ ವಿಜಯಕುಮಾರ್, ತಾಲೂಕು ಕೃಷಿ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಕೃಷಿ ಅಧಿಕಾರಿ ರೇಣುಕಾಪ್ರಸನ್ನ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಅಧಿಕಾರಿಗಳು, ಮುಖಂಡರಾದ ನಾರಾಯಣಗೌಡ, ಡಿ.ಟಿ.ವೆಂಕಟೇಶ್ ಇನ್ನಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು