LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಮತದಾನ ಧ್ವಜಾರೋಹಣ ಮೂಲಕ ಮತದಾನ ಜಾಗೃತಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದಲ್ಲಿಂದು ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಭುವನೇಶ್ವರಿ ವೃತ್ತದಲ್ಲಿರುವ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿರುವ ಮತಗಟ್ಟೆಯಲ್ಲಿ ಮತದಾನದ ಧ್ವಜಾರೋಹಣ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ನಾಗರಿಕರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಅನುಕೂಲವಾಗುವಂತೆ ಮತಗಟ್ಟೆಯನ್ನು ಪರಿಚಯಿಸುವ ಸಲುವಾಗಿ ಪ್ರತಿ ಮತಗಟ್ಟೆಯಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಅಕರ್ಷಕವಾಗಿ ವಿನ್ಯಾಸಗೊಳಿಸಿ ಮುದ್ರಿಸಲಾಗಿರುವ ಶ್ವೇತವರ್ಣದ ಧ್ವಜಾರೋಹಣವನ್ನು ಪೇಟೆ ಪ್ರೈಮರಿ ಶಾಲೆಯ ಮತಗಟ್ಟೆ ಅಧಿಕಾರಿಯವರು ನೇರವೇರಿಸಿದರು.

ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ ಅವರು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ‘ನಮ್ಮ ನಡೆ ಮತಗಟ್ಟೆ ಕಡೆ’ ಅಡಿ ವೈವಿಧ್ಯಮಯ ಮತದಾನ ಅರಿವು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ. ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಪ್ರತಿಯೊಬ್ಬರು ಮತದಾನವನ್ನು ಯಶಸ್ವಿಗೊಳಿಸಿ ಚುನಾವಣೆಯನ್ನು ಹಬ್ಬದ ಮಾದರಿಯಲ್ಲಿ ಆಚರಿಸಬೇಕು ಎಂದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ ರಾಜ್ಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ಧ್ವಜಾರೋಹಣ ಮತ್ತು ವಾಕಥಾನ್ ನಡಿಗೆ ಏರ್ಪಡಿಸಲಾಗಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿ ಮತದಾನಕ್ಕಾಗಿ ತೆರೆಯಲಾಗಿರುವ 983 ಮತಗಟ್ಟೆಗಳಲ್ಲಿ ಧ್ವಜಾರೋಹಣ ಹಾಗೂ ಆಯಾ ಗ್ರಾಮದ ಪ್ರಮುಖ ಸ್ಥಳದಿಂದ ಮತಗಟ್ಟೆವರೆಗೆ ವಾಕಥಾನ್ ನಡಿಗೆ ನಡೆದಿದೆ. ಶ್ವೇತವರ್ಣದ ಧ್ವಜದಲ್ಲಿ ಚುನಾವಣಾ ಲಾಂಛನ, ಮತದಾನದ ದಿನಾಂಕ ಹಾಗೂ ಸಮಯವನ್ನು ಮುದ್ರಿಸಲಾಗಿದೆ. ‘ಚುನಾವಣಾ ಪರ್ವ-ದೇಶದ ಗರ್ವ’ ದ ಮತದಾನದ ಘೋಷವಾಕ್ಯವಿದ್ದು, ಧ್ವಜವು ಮತದಾನದ ದಿನದವರೆಗೂ ಮತಗಟ್ಟೆಯ ಮುಭಾಂಗದಲ್ಲಿ ಹಾರಲಿದೆ. ನಾಗರಿಕರಿಗೆ ಮತದಾನದ ಜಾಗೃತಿ ಮೂಡಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಸಾರ್ವಜನಿಕರು, ಯುವಜನತೆ, ವಿಶೇಷಚೇತನರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದೇ ಏಪ್ರಿಲ್ 26ರಂದು ಮತಗಟ್ಟೆಗಳಿಗೆ ಆಗಮಿಸಿ ಮತ ಹಾಕುವಂತೆ ಪ್ರೇರೇಪಿಸಲಾಗುತ್ತಿದೆ. ಮತದಾನ ಪ್ರಕ್ರಿಯೆಯಲ್ಲಿ ಗ್ರಾಮೀಣ ಜನರು ಮುಂಚೂಣಿಯಲ್ಲಿದ್ದು, ನಗರಪ್ರದೇಶದ ಜನರು ಸಹ ಮತಗಟ್ಟೆಗೆ ಬಂದು ಮತ ಚಲಾಯಿಸಲು ಮುಂದಾಗಬೇಕು.

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ನೈತಿಕ ಮತದಾನವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ಮನವಿ ಮಾಡಿದರು.ಇದೇ ವೇಳೆ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮದಾಸ್ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿ ‘ಚುನಾವಣಾ ಪರ್ವ ದೇಶದ ಗರ್ವ ಮತದಾನದ ಘೋಷವಾಕ್ಯ ಮೊಳಗಿಸಿ ಮತದಾನದ ಅರಿವು ಮೂಡಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಚುನಾವಣಾ ತರಬೇತುದಾರರಾದ ಲಿಂಗರಾಜೇ ಅರಸ್, ನಗರಸಭೆ ಕಂದಾಯ ನಿರೀಕ್ಷಕರಾದ ಶರವಣ, ಸಮುದಾಯ ಸಂಘಟನಾ ಅಧಿಕಾರಿ ವೆಂಕಟ್ ನಾಯಕ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಶಾಲೆಯ ಕರಾಟೆ ತರಬೇತಿ ನಿರತ ಮಕ್ಕಳು, ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು