LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪರಿಷತ್ ನಾಲ್ಕು ಕ್ಷೇತ್ರಗಳಿಗೆ ಮತದಾನ


ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದ ಮತದಾನ ನಡೆದಿದೆ.ಬೆಂಗಳೂರು, ಆಗ್ನೇಯ, ಪಶ್ಚಿಮ, ಈಶಾನ್ಯ ಶಿಕ್ಷಕ ಹಾಗೂ ಪದವೀಧರರ ಕ್ಷೇತ್ರದ ಸ್ಥಾನಗಳಿಗೆ ನಡೆಯುತ್ತಿರುವ ಮತದಾನ ಜೋರಾಗಿಯೇ ನಡೆದಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಮತದಾರರು ಮತಗಟ್ಟೆಯತ್ತ ಧಾವಿಸಿ ಬರುತ್ತಿದ್ದಾರೆ.ಬೆಂಗಳೂರಿನ ನಾಗರಬಾವಿ ಬಳಿಯಿರುವ ಅಂಬೇಡ್ಕರ್ ಕಾಲೇಜಿನ ಮತಗಟ್ಟೆ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಕಾಂಗ್ರೆಸ್‌ನ ಮಾಜಿ ಕಾರ್ಪೋರೇಟರ್ ಮೋಹನ್ ಕುಮಾರ್ ಅವರನ್ನು ಬಿಜೆಪಿಯವರು ನಿಂದಿಸಿದರು ಎಂಬ ಹಿನ್ನೆಲೆಯಲ್ಲಿ ನೂಕಾಟ-ತಳ್ಳಾಟ ಹಾಗೂ ಮಾತಿನ ಚಕಮಕಿ ನಡೆದಿದೆ.ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದ ಗದಗ ಮತಗಟ್ಟೆಯಲ್ಲಿ ಬಿಜೆಪಿಯ ಕಾರ್ಯಕರ್ತರು ತಮ್ಮ ಪಕ್ಷದ ಶಾಲನ್ನು ಧರಿಸಿ ಮತಗಟ್ಟೆಗೆ ಪ್ರವೇಶಿಸಿದರು ಎಂಬ ಕಾರಣಕ್ಕೆ ಕಾಂಗ್ರೆಸ್‌ನವರು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. 
ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ವಾಗ್ದಾಳಿ ನಡೆದಿದೆ.ಧಾರವಾಡದ ಮತಗಟ್ಟೆಯೊಂದರಲ್ಲಿ ಮತಗಟ್ಟೆ ಸಿಬ್ಬಂದಿ ಬಿಜೆಪಿಯವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಮುಖಂಡ ದೀಪಕ್ ಚಿಂಚೋರೆ ಎಂಬುವರು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ.ಉಳಿದಂತೆ ಸಣ್ಣಪುಟ್ಟ ಘಟನೆಗಳು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST