LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಳೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ: `ಗವಿಮಾರ್ಗ' ಬಿಡುಗಡೆ

ಬೆಂಗಳೂರು: `ಗವಿಮಾರ್ಗ' ಪುಸ್ತಕ ಬಿಡುಗಡೆ, ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮತ್ತು ಮಂಡಲ್ ವರದಿ ಆಗಿದ್ದೇನು?, ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿಸೆಂಬರ್ 01, (ಶುಕ್ರವಾರ) 2023 ರಂದು ಬೆಳಿಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆಯಲಿದೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಡಾ. ಎಂ.ಎಸ್.ಮಣಿ ಅವರು ಬರೆದಿರುವ `ಗವಿಮಾರ್ಗ' ಪುಸ್ತಕವನ್ನು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು, ಮಾಜಿ ಸಚಿವ ಎಚ್.ಆಂಜನೇಯ ಅವರು ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಅಧ್ಯಕ್ಷತೆ ವಹಿಸುವರು.

ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು `ಮಂಡಲ್ ವರದಿ ಆಗಿದ್ದೇನು?, ಎಂಬ ವಿಚಾರದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರು ವಿಷಯದ ಮೇಲೆ ಪ್ರತಿಕ್ರಿಯಿಸುವರು.

ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಹೆಚ್.ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷ್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್.ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ  ಪ್ರೊ || ಬಿ.ಕೆ.ರವಿ ಇವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಪತ್ರಿಕೆಯ / ಸುದ್ದಿ ವಾಹಿನಿಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡಬೇಕಾಗಿ ವಿನಂತಿ. ಸಂಪರ್ಕಕ್ಕಾಗಿ: ಶಿವಪ್ಪ, ಕಾರ್ಯದರ್ಶಿ : 9902941218.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು