LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವೆ ಯುದ್ಧ ;

ಕೋಲಾರ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಅಕ್ರಮ ದಾಸ್ತಾನು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಡಾ. ಎಂ. ಆರ್. ರವಿ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಯುದ್ಧದ ನೆಪವೊಡ್ಡಿ ಅಡುಗೆ ಅನಿಲ ಖಾದ್ಯ ತೈಲ, ಧಾನ್ಯಗಳು ಸೇರಿದಂತೆ ಯಾವುದೇ ಅಗತ್ಯ ವಸ್ತುಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಅಥವಾ ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬAದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗುವುದು. ಜಿಲ್ಲೆಯಾದ್ಯಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಗೋದಾಮುಗಳ ಮೇಲೆ ಸರಬರಾಜು ಮತ್ತು ವಿತರಣೆ ಕುರಿತು ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರಿಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ರೈತರಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಕೃಷಿ ಪರಿಕರ ಮಾರಾಟ ಮಾಡುವ ವರ್ತಕರ ಮಾರಾಟ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗುವುದು. ಇಂತಹ ಪ್ರಕರಣಗಳಲ್ಲಿ ತೊಡಗುವವರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶ ಹಾಗೂ ಸಂಬAಧಿತ ಕೃಷಿ ಕಾಯ್ದೆಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಅಥವಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಯಾವುದೇ ವರ್ತಕರು ಅಥವಾ ವಿತರಕರು ನಿಗದಿಗಿಂತ ಹೆಚ್ಚಿನ ದರ ವಸೂಲಿ ಮಾಡಿದಲ್ಲಿ ಅಥವಾ ಸರಕು ನೀಡಲು ನಿರಾಕರಿಸಿದಲ್ಲಿ ಸಾರ್ವಜನಿಕರು ಮತ್ತು ರೈತರು ತಕ್ಷಣವೇ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಗಮನಕ್ಕೆ ತರಬೇಕು. ಜಿಲ್ಲೆಯಲ್ಲಿ ಯಾವುದೇ ವಸ್ತುವಿನ ಕೊರತೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು