LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಏಕದಿನ ಕ್ರಿಕೆಟ್‍ಗೆ ವಾರ್ನರ್ ವಿದಾಯ

ಸಿಡ್ನಿ: ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್‍ನಿಂದಲೂ ದೂರ ಸರಿಯುವುದಾಗಿ ಸೋಮವಾರ ಹೇಳಿದ್ದಾರೆ. ಆದರೆ, 2025ರ ಚಾಂಪಿಯನ್ಸ್ ಟ್ರೋಫಿಗೆ ಲಭ್ಯವಿರುವುದಾಗಿ ತಿಳಿಸಿದ್ದಾರೆ.

ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವಾರ್ನರ್ ಅವರ ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ. ಅದಕ್ಕೂ ಮುನ್ನ ಏಕದಿನ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್‍ನಲ್ಲಿ ಭಾರತದ ವಿರುದ್ಧ ಆಡಿದ ಏಕದಿನ ವಿಶ್ವಕಪ್‍ನ ಫೈನಲ್, ತಮ್ಮ ಕೊನೆಯ ಏಕದಿನ ಪಂದ್ಯ ಎಂದು ಅವರು ಹೇಳಿದ್ದಾರೆ.

‘ನಾನು ಏಕದಿನ ಕ್ರಿಕೆಟ್‍ನಿಂದಲೂ ನಿವೃತ್ತಿ ಪಡೆಯುತ್ತಿದ್ದೇನೆ. ಇದನ್ನೇ ನಾನು ಭಾರತದಲ್ಲಿ ಹೇಳಿದ್ದು. ಭಾರತದಲ್ಲಿ ವಿಶ್ವಕಪ್ ಗೆದ್ದಿರುವುದು ನಿಜಕ್ಕೂ ದೊಡ್ಡ ಸಾಧನೆ’ ಎಂದು ಅವರು ಸಿಡ್ನಿ ಕ್ರಿಕೆಟ್ ಗ್ರೌಂಡ್‍ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

2009ರಲ್ಲಿ ಹೋಬರ್ಟ್‍ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ವಾರ್ನರ್, ಈವರೆಗೂ 161 ಒಡಿಐ ಪಂದ್ಯಗಳನ್ನು ಆಡಿದ್ದಾರೆ. 45.30 ಸರಾಸರಿಯಲ್ಲಿ 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕ ಹಾಗೂ 33 ಅರ್ಧಶತಕಗಳು ಸೇರಿವೆ.

111 ಟೆಸ್ಟ್ ಪಂದ್ಯಗಳು ಆಡಿರುವ ವಾರ್ನರ್ 26 ಶತಕ ಹಾಗೂ 36 ಅರ್ಧಶತಕಗಳು ಸೇರಿ 8,695 ರನ್ ಗಳಿಸಿದ್ದಾರೆ. ಟೆಸ್ಟ್‍ನಲ್ಲಿ ಅವರ ಸರಾಸರಿ 44.5. ಟಿ-20 ಮಾದರಿಯ ಪಂದ್ಯಗಳಲ್ಲಿ ವಾರ್ನರ್ ಮುಂದುವರಿಯಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು