LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜೈಲಿಗೆ ಹೋಗಲು ನಾವೂ ಸಿದ್ಧ ಡಾ. ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ದೇಶಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸ ಲಾಗದೆ, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ ನಾವಾಗಲಿ ಹೆದರುವುದಿಲ್ಲ, ದೇಶಕ್ಕಾಗಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು.

ಆಮ್ ಆದ್ಮಿ ಪಾರ್ಟಿ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕರು ಮತ್ತು ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರಾಳ ದಿನಾಚರಣೆಯನ್ನು ಆಚರಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೊರಟವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ.

ಐಟಿ, ಇ.ಡಿಯಂತಹ ಸಂಸ್ಥೆಗಳನ್ನು ಬಳಸಿಕೊಂಡು ತಮ್ಮ ವಿರುದ್ಧ ಇರುವವರನ್ನು ಹಣಿಯಲು ಕೇಂದ್ರ ಸರ್ಕಾರ ಸಂಚು ಮಾಡಿದೆ. ಕೇಜ್ರಿವಾಲ್ ಅವರ ಜನಪ್ರಿಯತೆ ಸಹಿಸದೆ ಕುತಂತ್ರದಿಂದ ಬಂಧಿಸಲಾಗಿದೆ. ಅವರಿಗೆ ಜಾಮೀನು ಕೂಡ ಸಿಗದಂತೆ ತಂತ್ರ ಮಾಡಲಾಗಿದೆ ಎಂದು ದೂರಿದರು.ಚುನಾವಣಾ ಬಾಂಡ್ ಹೆಸರಿನಲ್ಲಿ ಕಪ್ಪುಹಣವನ್ನು ತಮ್ಮ ಪಕ್ಷದ ಅಕೌಂಟ್‍ಗೆ ಹಾಕಿಸಿಕೊಂಡಿದ್ದಾರೆ.

ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವರನ್ನು ಹೆದರಿಸಿ ಅವರ ಪಕ್ಷದ ಚುನಾವಣಾ ಬಾಂಡ್‍ಗಳನ್ನು ಖರೀದಿ ಮಾಡುವಂತೆ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿಜೆಪಿ ನಾಯಕರು, ಅವರನ್ನು ಮೊದಲು ಜೈಲಿಗೆ ಹಾಕಬೇಕು ಎಂದರು.

ಬಂಧಿಸಿದ ಮಾತ್ರಕ್ಕೆ ನಾವಾಗಲೀ ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಅವರಾಗಲಿ ಹೆದರುವುದಿಲ್ಲ, ನಮ್ಮನ್ನು ಕೂಡ ಜೈಲಿಗೆ ಹಾಕಲಿ ಎಂದು ಸವಾಲೆಸೆದ ಅವರು, ಈ ಬಾರಿ ಚುನಾವಣೆ ಪಾರದರ್ಶಕವಾಗಿ, ನ್ಯಾಯಯುತವಾಗಿ ನಡೆಯುತ್ತದೆ ಎನ್ನುವ ನಂಬಿಕೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆ ನೋಡಿ ಪ್ರಧಾನಿ ಮೋದಿ ಭಯಗೊಂಡಿದ್ದಾರೆ. ಅದಕ್ಕಾಗಿಯೇ ಕೇಜ್ರಿವಾಲ್‍ರನ್ನು ಕಟ್ಟಿಹಾಕಲು ಅಕ್ರಮವಾಗಿ ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಇ.ಡಿ, ಐಟಿ, ಸಿಬಿಐಯಂತಹ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ರಾಜ್ಯ ಕಾರ್ಯದರ್ಶಿಗಳಾದ ಉಷಾ ಮೋಹನ್, ಬಸವರಾಜ ಮುದಿಗೌಡರ್, ನಗರಾಧ್ಯಕ್ಷ ಡಾ.ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ಚೆನ್ನಪ್ಪ ಗೌಡ ,ಆರಾಧ್ಯ ,ಜ್ಯೋತಿಷ್ ಕುಮಾರ್ , ವೀಣಾ ಸರವು ಮಹಾಲಕ್ಷ್ಮಿ, ಅಂಜನಾ ಗೌಡ ಸತ್ಯವಾಣಿ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು