LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ

ಬೆಂಗಳೂರು: "ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. "ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. ೭ ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ ೫ ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ" ಎಂದು ತಿಳಿಸಿದರು.

"ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ ೨೫ ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ. ಅವರುಗಳು ಮೊದಲು ತಮ್ಮಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ" ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು