ಬೆಂಗಳೂರು: ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಕುರಿತು ತಾವು ನೀಡಿದ್ದ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. "ಯಾರು ಏನೇ ಮಾಡಿದರೂ, ಎಷ್ಟೇ ವಿರೋಧಿಸಿದರೂ ನಾವು ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಿದ್ದೇವೆ" ಎಂದು ತಮ್ಮ ಮಾತನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೈಗೊಂಡಿರುವ ನಿರ್ಧಾರವನ್ನು ಸಂಪೂರ್ಣವಾಗಿ ಸ್ವಾಗತಿಸುವುದಾಗಿ ಹೇಳಿದರು.