LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕುಸ್ತಿ: ಬಜರಂಗ್, ವಿನೇಶಾ, ಸಾಕ್ಷಿಗೆ ಆಹ್ವಾನ ನೀಡಿದ ಡಬ್ಲ್ಯುಎಫ್‍ಐ

ನವದೆಹಲಿ: ಮಾರ್ಚ್‍ನಲ್ಲಿ ನಡೆಯುವ ರಾಷ್ಟ್ರೀಯ ಕುಸ್ತಿ ಟ್ರಯಲ್ಸ್‍ನಲ್ಲಿ ಪಾಲ್ಗೊಳ್ಳುವಂತೆ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶಾ ಫೋಗಾಟ್ ಮತ್ತು ನಿವೃತ್ತಿ ಘೋಷಿಸಿರುವ ಸಾಕ್ಷಿ ಮಲಿಕ್ ಅವರಿಗೆ ಭಾರತ ಕುಸ್ತಿ ಸಂಸ್ಥೆ (ಡಬ್ಲ್ಯುಎಫ್‍ಐ) ಸೋಮವಾರ ಆಹ್ವಾನ ನೀಡಿದೆ.

ಏ.11ರಿಂದ 16 ರವರೆಗೆ ಕಿರ್ಗಿಸ್ತಾನದಲ್ಲಿ ನಡೆಯುವ ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‍ಷಿಪ್ ಮತ್ತು ಏ.19 ರಿಂದ 21ರವರೆಗೆ ಅದೇ ಸ್ಥಳದಲ್ಲಿ ಏಷ್ಯನ್ ಒಲಿಂಪಿಕ್ ಗೇಮ್ಸ್ ಕ್ವಾಲಿಫೈಯರ್ ಟೂರ್ನಿಗೆ ತಂಡಗಳನ್ನು ಆಯ್ಕೆ ಮಾಡಲು ರಾಷ್ಟ್ರೀಯ ಟ್ರಯಲ್ಸ್ ನಡೆಸಲಾಗುತ್ತಿದೆ ಎಂದು ಡಬ್ಲ್ಯುಎಫ್‍ಐ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿಯ ಕೆ.ಡಿ. ಜಾಧವ್ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಮಾರ್ಚ್ 10 ಮತ್ತು 11ರಂದು ಟ್ರಯಲ್ಸ್ ನಡೆಯಲಿದೆ.ಡಬ್ಲ್ಯುಎಫ್‍ಐ ಮೇಲೆ ವಿಧಿಸಿದ್ದ ಅಮಾನತನ್ನು ಈ ತಿಂಗಳ ಆರಂಭದಲ್ಲಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ವಾಪಸ್ ಪಡೆದಿತ್ತು. ಡಬ್ಲ್ಯುಎಫ್‍ಐ ಮಾಜಿ ಅಧ್ಯಕ್ಷ ಬ್ರಿಜ್‍ಭೂಷಣ್ ಸಿಂಗ್ ವಿರುದ್ಧ ಹೋರಾಟ ನಡೆಸಿದ್ದ ಕುಸ್ತಿಪಟುಗಳ ವಿರುದ್ಧ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂಬ ಷರತ್ತನ್ನು ಅದು ವಿಧಿಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು