LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ನನ್ನ ಮಾತಿನಲ್ಲಿ ತಪ್ಪೇನಿದೆ: ಜಮೀರ್

ಬೆಳಗಾವಿ: ಸ್ಪೀಕರ್ ಸ್ಥಾನದ ಕುರಿತು ನನ್ನ ಮಾತಿನಲ್ಲಿ ತಪ್ಪೇನಿದೆ ಎಂದು ಪ್ರೆಶ್ನೆ ಮಾಡಿರುವ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಬಿಜೆಪಿ ಅವರಿಗೆ ವಿವಾದ ಸೃಷ್ಟಿ ಮಾಡುವುದೇ ಕೆಲಸ ಎಂದು ಕಿಡಿ ಕಾರಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಗೌರವಯುತ ಹುದ್ದೆ ಯಾದ ಸ್ಪೀಕರ್ ಸ್ಥಾನ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯದ ಮಾನ್ಯ ಯು.ಟಿ.ಖಾದರ್ ಅವರಿಗೆ ನೀಡಿದೆ. ಸ್ಪೀಕರ್ ಪೀಠ ಕ್ಕೆ ನಾನೂ ಸೇರಿದಂತೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ನಮಸ್ಕರಿಸಿ ಗೌರವ ನೀಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಸಮುದಾಯಕ್ಕೆ ನೀಡಿದ ಗೌರವ ಹುದ್ದೆ ಬಗ್ಗೆ ಉಪಕಾರ ಸ್ಮರಣೆ ಮಾಡಿದ್ದೇನೆ ಇದು ತಪ್ಪಾ ಎಂದು ಕೇಳಿದರು.

ಹೈದರಾಬಾದ್ ನಲ್ಲಿ ನಾನು ಮಾತನಾಡಿದ ಸಂದರ್ಭ, ವೇದಿಕೆ, ಅಲ್ಲಿನ ಸಂವಾದ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲದೆ ಕೇವಲ ರಾಜಕೀಯ ಲಾಭ ಪಡೆಯಲು ವಿವಾದದ ಸ್ವರೂಪ ನೀಡಲಾಗಿದೆ ಎಂದು ತಿಳಿಸಿದ್ದಾರೆ.ಬಿಜೆಪಿ ನಾಯಕರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅವರಿಗೆ ಬೇಕಾದಂತೆ ತಿರುಚಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಅನುದಾನ ನೀಡುವ ಬಗ್ಗೆ ಮಾತನಾಡಿದರೆ ಬಿಜೆಪಿ ಅವರು ಅದನ್ನೂ ವಿವಾದ ಮಾಡುತ್ತಾರೆ. ಅವರ ಮಾತುಎಲ್ಲ ಸಮುದಾಯ ಅಭಿವೃದ್ಧಿ ಕಾಣಬೇಕು ಎಂಬುದು. ಸಾಮಾಜಿಕ ನ್ಯಾಯ ಕಾಂಗ್ರೆಸ್‍ನ ಬದ್ಧತೆ ಎಂದು ತಿಳಿಸಿದರು.

ಮೌಲಾನಾ ತನ್ವಿರ್ ಹಾಶ್ಮಿ ಕುರಿತ ಹೇಳಿಕೆ ಬಗ್ಗೆ ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ ಸಚಿವರು, ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೈಯಕ್ತಿಕ ದ್ವೇಷದಿಂದ ಹೇಳಿದ್ದಾರೆ. ಅವರು ತಮ್ಮ ಆರೋಪ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು. ಯತ್ನಾಳ್ ಹಾಗೂ ಹಾಶ್ಮಿ ಅವರು ಒಂದೇ ಜಿಲ್ಲೆ ಅವರು.

ಇವರಿಗೆ ಮೊದಲಿನಿಂದಲೂ ಅವರ ಬಗ್ಗೆ ದ್ವೇಷ. ಹೀಗಾಗಿ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಸಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ತನ್ವಿರ್ ಹಾಶ್ಮಿ ಬಗ್ಗೆ ಯತ್ನಾಳ್‍ಗೆ ಹೊಟ್ಟೆ ಕಿಚ್ಚು. ಅವರು ಜೆಡಿಎಸ್‍ನಲ್ಲಿದ್ದಾಗ ಎಷ್ಟು ಬಾರಿ ಇವರ ಮನೆಗೆ ರಿ ಹೋಗಿದ್ದರು ಎಂಬ ಬಗ್ಗೆಯೂ ಹೇಳಲಿ ಎಂದು ಪ್ರೆಶ್ನೆ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು