LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಕಮಲಾಧಿಪತಿ  ಆಯ್ಕೆ ಯಾವಾಗ?

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೇಮಕವೋ ಅಥವಾ ಚುನಾವಣೆಯೋ


ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಅಥವಾ ಅವಿರೋಧ ಆಯ್ಕೆ ನಡೆಯುವುದೋ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ. ಈಗಾಗಲೇ ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರ ಅಧಿಕಾರಾವಧಿ ಮೂರು ವರ್ಷಗಳು ಕಳೆದಿದೆ. ಕಳೆದ 10ನೇ ತಾರೀಖಿಗೆ ಅವರ ಅಧಿಕಾರಾವಧಿ ಮುಗಿದಿದ್ದು, ಅಂದಿನಿAದ ಅವರು ಅಧ್ಯಕ್ಷ ಸ್ಥಾನದ ಕಾರ್ಯ ನಿರ್ವಹಣೆಯನ್ನು ಸಮಪರ್ಕವಾಗಿ ನಿರ್ವಹಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ. ಕಳೆದವಾರದ ವರೆಗೂ ಅಂದರೆ ನಿನ್ನೆಯವರೆಗೂ ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿದ್ದ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಚುನಾವಣೆ ಅಥವಾ ಅವಿರೋಧ ಆಯ್ಕೆ ನಡೆಯಬೇಕಿತ್ತು. ಬಹುತೇಕ ರಾಜ್ಯಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಇದುವರೆಗೂ ಆ ಪ್ರಕ್ರಿಯೆ ನಡೆದಿಲ್ಲ ಎಂದು ನಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಧ್ಯಕ್ಷರ ಆಯ್ಕೆಗೆ ಚುನಾವಣಾ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಇದುವರೆಗೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಹಾಗಾಗಿ ರಾಜ್ಯಾಧ್ಯಕ್ಷರ ಆಯ್ಕೆ ಒಂದು ರೀತಿಯಲ್ಲಿ ಗೊಂದಲದ ಗೂಡಾಗಿದೆ. ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದರೆ ವಿಜಯೇಂದ್ರ ಅವರೇ ಶೇ. 80ರಿಂದ 90ರಷ್ಟು ಮತಗಳಿಸಿ ಭರ್ಜರಿ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸದಲ್ಲಿ ಅವರ ಬೆಂಬಲಿಗರಿದ್ದಾರೆ. ಆದರೆ ವಿಜಯೇಂದ್ರ ಅವರ ವಿರೋಧಿ ಬಣದಲ್ಲಿಗುರುತಿಸಿಕೊಂಡಿರುವ ಕೆಲವ ಮುಖಂಡರು ಚುನಾವಣೆಯಾದರೂ ಮಾಡಲಿ, ಒಮ್ಮತವಾಗಿ ಆಯ್ಕೆ ಮಾಡಲಿ ಒಟ್ಟಾರೆ ಅಧ್ಯಕ್ಷರ ಆಯ್ಕೆ ನಡೆಯಬೇಕು ಎಂಬ ವಾದ ಮಂಡಿಸುತ್ತಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST