LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಶ್ವ ವಿದ್ಯಾಲಯದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾರ್ಯಗಾರ

ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಮಕ್ಕಳ ರಕ್ಷಣಾ ನಿರ್ದೇಶನಾಯಾದ ನಿರ್ದೇಶಕರಾದ ಡಾ.ಸ್ನೇಹ ಸಿ. ವಿಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸಹಯೋಗದಲ್ಲಿ ‘ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆ’ ಕುರಿತು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗೆ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಮಕ್ಕಳ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಮಕ್ಕಳ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಸಮಾಜದ ಪಾತ್ರದ ಬಗ್ಗೆ ವಿಶೇಷವಾಗಿ ತಿಳಿಸಲಾಯಿತು.ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ರಮೇಶ್ ಬಿ. ವಿದ್ಯಾರ್ಥಿಗಳನ್ನು ಉದ್ದೇಶಿ ಮಾತನಾಡಿದ ಅವರು ಮಕ್ಕಳ ಹಕ್ಕುಗಳು, ಮಕ್ಕಳ ಕಾನೂನುಗಳ ರಕ್ಷಣೆ ವಿದ್ಯಾರ್ಥಿಗಳ ಜವಾಬ್ದಾರಿ, ಪಾತ್ರ ಬಾಲಗರ್ಭಿಣಿ, ಬಾಲ್ಯ ವಿವಾಹ, ಸೈಬರ್ ಪ್ರಕಣಗಳು ಹಾಗೂ ಮಕ್ಕಳ ಮೇಲಿನ ದೌರ್ಜನ್ಯದ ದತ್ತಾಂಶಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಎನ್ನೋಲ್ಡ್ ಸಂಸ್ಥೆ ನಿರ್ದೇಶಕರಾದ ಖುಷಿ ಕುಶಾಲಪ್ಪ ಮಾತನಾಡಿ “ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ರ ಕುರಿತು ವಿವರಣೆ ಹಾಗೂ ಪೋಕೋ ಪ್ರಕರಣ ತಡೆ ಕುರಿತಂತೆ” ವಿದ್ಯಾರ್ಥಿಗಳ ಪಾತ್ರ ಮತ್ತು ಜವಾಬ್ದಾರಿಗಳನ್ನು ತರಬೇತಿ ನೀಡಿದರು. ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರಾದ ಮೀನಾ ಜೈನ್ ರವರು ಬಾಲನ್ಯಾಯ ಕಾಯ್ದೆ - 2015, (ತಿದ್ದು ಪಡಿ -2021) ಮಕ್ಕಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮತ್ತು ಜವಾಬ್ದಾರಿ”ಕುರಿತಂತೆ ತರಬೇತಿ ನೀಡಿದರು
ಕಾರ್ಯಕ್ರಮದಲ್ಲಿ ಪ್ರೊ.ರಿತಿಕಾ ಸಿನ್ಹಾ, ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನ ವಿಭಾಗ, ಡಾ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು