LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

 "World Cup ೨೦೨೫: ಒಂದೇ ಒಂದು ಪಂದ್ಯವನ್ನು ಗೆಲ್ಲದೆ ವಿಶ್ವಕಪ್‌ನಿಂದ ಹೊರಬಿದ್ದ ಪಾಕಿಸ್ತಾನ"

ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನ ತಂಡಗಳು ಕಳಪೆ ಪ್ರದರ್ಶನ ನೀಡುತ್ತಲೇ ಇವೆ. ಚಾಂಪಿಯನ್ಸ್ ಟ್ರೋಫಿಯಿAದ ಹಿಡಿದು ವಿಶ್ವಕಪ್ ಮತ್ತು ಟಿ೨೦ ವಿಶ್ವಕಪ್‌ವರೆಗೆ, ಪುರುಷರ ತಂಡವು ಮೊದಲ ಸುತ್ತಿನಲ್ಲೇ ಹೊರಬಿದ್ದಿದೆ. ಮಹಿಳಾ ತಂಡವೂ ಇದಕ್ಕೆ ಹೊರತಾಗಿಲ್ಲ. ಭಾರತ ಮತ್ತು ಶ್ರೀಲಂಕಾದಲ್ಲಿ
ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ೨೦೨೫ ರ ಲೀಗ್ ಹಂತದಿAದಲೇ ಪಾಕಿಸ್ತಾನ ತಂಡ ತನ್ನ ಪ್ರಯಾಣ ಕೊನೆಗೊಳಿಸಿದೆ. ಫಾತಿಮಾ ಸನಾ
ನಾಯಕತ್ವದ ತಂಡವು ಸೋತಿದ್ದಲ್ಲದೆ, ಒಂದೇ ಒAದು ಪಂದ್ಯವನ್ನು ಗೆಲ್ಲದೆ ಟೂರ್ನಿಯಿಂದ ಹೊರಬಿದ್ದಿದೆ.

ಸೆಮಿಫೈನಲ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿದ್ದ ಪಾಕಿಸ್ತಾನ ತಂಡ ಕೊನೆಯ ಲೀಗ್ ಪಂದ್ಯದಲ್ಲಾದರೂ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಅಕ್ಟೋಬರ್ ೨೪ ರ ಶುಕ್ರವಾರ ಕೊಲಂಬೊದಲ್ಲಿ ನಡೆಯಬೇಕಿದ್ದ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಕೇವಲ ೪.೨ ಓವರ್ ಗಳ ನಂತರ ಮಳೆಯಿಂದಾಗಿ ರದ್ದುಗೊಳಿಸಲಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ೧೮ ರನ್ ಗಳಿಸಿತ್ತು. ಆದರೆ ಆ ಬಳಿಕ ಮಳೆ ಬಂದ ಕಾರಣದಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.  ಈ ಫಲಿತಾಂಶದೊAದಿಗೆ ಪಾಕಿಸ್ತಾನ, ಪಂದ್ಯಾವಳಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ ಒAದನ್ನೂ ಗೆಲ್ಲದೆ ಟೂರ್ನಿಯಿಂದ ಹೊರಬಿತ್ತು. ಈ ೭ ಪಂದ್ಯಗಳಲ್ಲಿ ಪಾಕ್ ತಂಡವು ನಾಲ್ಕು ಪಂದ್ಯಗಳನ್ನು ಸೋತರೆ, ಉಳಿದ ಮೂರು ಪಂದ್ಯಗಳು ಮಳೆಯಿಂದಾಗಿ ರದ್ದಾದವು. ಇದೇ ಕಾರಣಕ್ಕೆ ಪಾಕಿಸ್ತಾನಕ್ಕೆ ಮೂರು ಅಂಕಗಳು ಸಿಕ್ಕವು.

ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಪಾಕ್ ತಂಡ ೭ ನೇ ಸ್ಥಾನ ಪಡೆದುಕೊಂಡಿತು. ಏಕದಿನ ವಿಶ್ವಕಪ್?ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿತು. ಆದ್ದರಿಂದ ಪಾಕ್ ತಂಡದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಆಡಿಸಲಾಯಿತು. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿಯೇ ಬಾAಗ್ಲಾದೇಶದ ವಿರುದ್ಧ ಸೋತಿತು. ನಂತರ ಟೀA ಇಂಡಿಯಾ, ಪಾಕಿಸ್ತಾನವನ್ನು ಮಣಿಸಿತ್ತು. ಆ ಬಳಿಕ ಆಸ್ಟೆçÃಲಿಯಾ ವಿರುದ್ಧವೂ ಹೀನಾಯ ಸೋಲನ್ನು ಅನುಭವಿಸಿತು. ಆ ಬಳಿಕ ಮಳೆಯ ಕಾರಣಗಳಿಂದಾಗಿ ಕೆಲವು ಪಂದ್ಯಗಳನ್ನು ರದ್ದುಗೊಳಿಸಲಾಯಿತು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು