LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬಾಲಿವುಡ್ ರಂಗಿನಲ್ಲಿ ಅರಳಲಿದೆ ಡಬ್ಲ್ಯುಪಿಎಲ್: ಇಂದಿನಿಂದ ಮಹಿಳಾ ಟಿ20

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ಝಗಮಗಿಸುವ ದೀಪಗಳ ಬೆಳಕು ಚೆಲ್ಲಿತ್ತು. ಅದನ್ನು ಮೀರಿಸುವ ಪೈಪೋಟಿಯಲ್ಲಿ ಬಾಲಿವುಡ್ ತಾರೆಯರ ಹೊಳಪು ಕೂಡ ಹರಡಿತ್ತು. ಆ ಸೂಪರ್‍ಸ್ಟಾರ್ ಗಳನ್ನು ಕಣ್ಣರಳಿಸಿ ನೋಡುತ್ತ ನಿಂತಿದ್ದವರು ಮಹಿಳಾ ಕ್ರಿಕೆಟ್ ತಾರೆಯರು.

ಅವರೆಲ್ಲರನ್ನೂ ನೋಡುತ್ತ ಕೇಕೆ ಹಾಕಿ ಚಪ್ಪಾಳೆ ತಟ್ಟುತ್ತಿದ್ದವರ ದಂಡು ಪ್ರೇಕ್ಷಕರ ಗ್ಯಾಲರಿಯಲ್ಲಿತ್ತು.ಶುಕ್ರವಾರ ಇಲ್ಲಿ ಆರಂಭವಾಗಲಿರುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಕ್ರಿಕೆಟ್ ಟೂರ್ನಿಯ ಉದ್ಘಾಟನೆಗೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮದ ತಯಾರಿಯಲ್ಲಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಟೈಗರ್ ಶ್ರಾಫ್, ಶಾಹೀದ್ ಕಪೂರ್ ಮತ್ತು ವರುಣ್ ಧವನ್ ಅವರು ನೃತ್ಯದ ತಾಲೀಮು ನಡೆಸಿದರು.

ಆ ವೇದಿಕೆಯ ಹಿಂಭಾಗದಲ್ಲಿಯೇ ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡದ ಆಟಗಾರ್ತಿಯರೂ ಕ್ರಿಕೆಟ್ ಅಭ್ಯಾಸ ಮಾಡಿದರು. ಆಗಾಗ ವೇದಿಕೆಯ ಬಳಿ ಸಾಗಿ ಸಿನಿತಾರೆಯರ ‘ರಿಹರ್ಸಲ್’ ವೀಕ್ಷಿಸಿದರು.ಹೋದ ವರ್ಷದ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ಸ್ ಅಪ್ ಡೆಲ್ಲಿ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಮಾರ್ಚ್ 4ರವರೆಗೆ ಇದೇ ತಾಣದಲ್ಲಿ ಒಟ್ಟು ಹನ್ನೊಂದು ಪಂದ್ಯಗಳು ನಡೆಯಲಿವೆ. ಐದು ತಂಡಗಳು ಪೈಪೋಟಿ ನಡೆಸಲಿವೆ. ನಂತರದ ಹಂತದ ಪಂದ್ಯಗಳು ದೆಹಲಿಯಲ್ಲಿ ನಡೆಯಲಿವೆ.

ಯುವ ಆಟಗಾರ್ತಿಯರಿಗೆ ಅವಕಾಶ: ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಜ್ಜೆಗುರುತು ಮೂಡಿಸುವ ಛಲದಲ್ಲಿರುವ ಯುವ ಆಟಗಾರ್ತಿಯರಿಗೆ ಈ ಟೂರ್ನಿಯಲ್ಲಿ ಅನುಭವಿ ಆಟಗಾರ್ತಿಯರೊಂದಿಗೆ ಆಡುವ ಅವಕಾಶ ದೊರೆಯುತ್ತಿದೆ.ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದಿರುವ ಮೆಗ್ ಲ್ಯಾನಿಂಗ್ ಅವರು ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ತಂಡದಲ್ಲಿರುವ ಭಾರತದ ಉದಯೋನ್ಮುಖ ಆಟಗಾರ್ತಿ ತಿತಾಸ್ ಸಾಧು, ರಾಧಾ ಯಾದವ್, ಶಿಖಾ ಪಾಂಡೆ ಅವರಂತಹವರಿಗೆ ಉತ್ತಮ ಮಾರ್ಗದರ್ಶನ ದೊರೆಯುವ ನಿರೀಕ್ಷೆ ಇದೆ.

‘ಭಾರತದಲ್ಲಿ ದೇಶಿ ಕ್ರಿಕೆಟ್‍ನಲ್ಲಿ ಮಹಿಳೆಯರು ಬೆಳೆಯಲು ಹೆಚ್ಚಿನ ಅವಕಾಶವನ್ನು ಡಬ್ಲ್ಯುಪಿಎಲ್ ನೀಡುತ್ತಿದೆ. ಇದರಿಂದಾಗಿ ಭಾರತದಲ್ಲಿ ಮಹಿಳಾ ಕ್ರಿಕೆಟ್ ಬೆಳವಣಿಗೆ ಏರುಗತಿಯಲ್ಲಿದೆ’ ಎಂದು ಮೆಗ್ ಲ್ಯಾನಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಮುಂಬೈ ತಂಡವು ತನ್ನ ಗೆಲುವಿನ ಓಟವನ್ನು ಈ ಬಾರಿಯೂ ಮುಂದುವರಿಸುವ ಛಲದಲ್ಲಿದೆ. ಹೋದ ವರ್ಷ ಇದ್ದ ಬಹುತೇಕ ಆಟಗಾರ್ತಿಯರು ಈ ಸಲವೂ ಇದ್ದಾರೆ. ಹರ್ಮನ್‍ಪ್ರೀತ್ ಕೌರ್ ನಾಯಕತ್ವದ ತಂಡದಲ್ಲಿ ನಥಾಲಿ ಶಿವರ್, ಅಮೆಲಿಯಾ ಕೆರ್, ಹಯಲಿ ಮ್ಯಾಥ್ಯೂಸ್ ಅವರು ಪ್ರಮುಖರಾಗಿದ್ದಾರೆ. ಯುವ ಆಟ ಗಾರ್ತಿ ಅಮನದೀಪ್ ಕೌರ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು