LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಜೆರಾಕ್ಸ್' ಟ್ರೈಲರ್ ಬಿಡುಗಡೆ ಜೀ5 ಕಿರುಪರಿಚಯ

ಜೀ5 ಭಾರತದ ಅತಿ ಮುಖ್ಯ ಡಿಜಿಟಲ್ ವೇದಿಕೆಗಳಲ್ಲಿ ಒಂದಾಗಿದ್ದು, ಬಹುಭಾಷಾ ಕಥೆಗಳನ್ನು ಇಡೀ ಪ್ರಪಂಚಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಇದು ಜೀ ಎಂಟರ್ಟೇನ್ಮೆAಟ್ ಎಂಟರ್‌ಪ್ರೈಸಸ್ ಸಸ್ ಲಿಮಿಟೆಡ್ ಅವರ ಡಿಜಿಟಲ್/ ಓ ಟಿ ಟಿ ಮಾಧ್ಯಮವಾಗಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಲಿ, ಮರಾಠಿ, ಇಂಗ್ಲಿಷ್ ಭಾಷೆಗಳು ಸೇರಿದಂತೆ ಹಲವಾರು ಭಾಷೆಗಳ ಚಿತ್ರಗಳನ್ನು ಪ್ರಸಾರ ಮಾಡುತ್ತದೆ.
ಜೀ5ನ ಬಹುನಿರೀಕ್ಷಿತ ವೆಬ್ ಸರಣಿ `ಜೆರಾಕ್ಸ್' ನ ಟ್ರೈಲರ್ ಇಂದು ಬಿಡುಗಡೆಯಾಗಿದೆ. 6 ಸಂಚಿಕೆಗಳುಳ್ಳ ಈ ಹಾಸ್ಯ ವೆಬ್ ಸರಣಿ ಇಂದು ತನ್ನ ಟ್ರೈಲರ್ ತುಣುಕಿನ ಮೂಲಕ ಎಲ್ಲರ ಮನೆ ಮಾತಾಗಿದೆ.
ಖ್ಯಾತ ನಟ, ನಿರ್ಮಾಪಕ ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಹಾಗೂ ಬ್ಲಿಂಕ್ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ `ಜೆರಾಕ್ಸ್' ನಲ್ಲಿ ನಾಗಭೂಷಣ್, ಪಾಯಲ್ ಚೆಂಗಪ್ಪ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಮಂಜು ಪಾವಗಡ, ಓಂ ಪ್ರಕಾಶ್ ರಾವ್, ಶ್ರೀವತ್ಸ, ಯಶ್ವಂತ್ ಶೆಟ್ಟಿ, ವಿಜಯ್ ಪ್ರಸಾದ್, ತುಕಾಲಿ ಸಂತು, ಜಗ್ಗಪ್ಪ, ಸಿದ್ದು ಮಂಡ್ಯ, ಸುಧಾಕರ್ ಗೌಡ ಮುಂತಾದವರು ನಟಿಸಿರುತ್ತಾರೆ.
ಮಳವಳ್ಳಿಯ ರಾಯದುರ್ಗದ ಪ್ರಕಾಶ (ನಾಗಭೂಷಣ) ಒಬ್ಬ ಸಾಮಾನ್ಯ ಜೆರಾಕ್ಸ್ ಅಂಗಡಿ ಕೆಲಸಗಾರನಾಗಿರುತ್ತಾನೆ. ಅವನ ಜೆರಾಕ್ಸ್ ಯಂತ್ರಕ್ಕೆ ಒಂದು ತಾಯಿತ ಸೇರಿದಾಗ ಅವನ ಜೀವನ ಬದಲಾಗುತ್ತದೆ. ಅವನು ತೆಗೆಯುವ ಜೆರಾಕ್ಸ್ ಕಾಪಿಗಳಿಗೆ ಜೀವ ಬಂದು ಅವನ ಜೀವನ ಉಲ್ಟಾಪಲ್ಟಾವಾಗುತ್ತದೆ.
ಇದರಿಂದ ಆಗುವ ಅಚಾನಕ್ ಬದಲಾವಣೆಗಳು, ಊರಿನಲ್ಲಾಗುವ ಆಶ್ಚರ್ಯಕರ ಘಟನೆಗಳು, ಕುತೂಹಲಕಾರಿ ಸನ್ನಿವೇಶಗಳನ್ನು ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಜೀ5ನಲ್ಲಿ ಇದೇ ಏಪ್ರಿಲ್ 24ರಿಂದ ಈ ವೆಬ್ ಸರಣಿಯು ಪ್ರೇಕ್ಷಕರಿಗೆ ನಗೆ ಊಟ ಉಣಬಡಿಸಲಿದೆ.
ನಟ, ನಿರ್ಮಾಪಕ ಡಾಲಿ ಧನಂಜಯ ಮಾತನಾಡಿ, "ನನಗೆ ಈ ಕಥೆ ಇಷ್ಟವಾಗಲು ಕಾರಣ ಅದು ಹೇಳುವ ತತ್ವ, ಪ್ರತಿಯೊಂದು ಹಾಸ್ಯ ಸನ್ನಿವೇಶದ ಹಿಂದೆ ಅಡಗಿರುವ ತತ್ವ, ನನ್ನನ್ನು ತನ್ನತ್ತ ಸೆಳೆಯಿತು. ಜೆರಾಕ್ಸ್ ಕಾಪಿಗಳಿಗೆ ಜೀವ ಬಂದಾಗ, ಜನರು ತಮ್ಮ ಪ್ರತಿಬಿಂಬವನ್ನೇ ಸ್ವೀಕರಿಸಲು ಹೇಗೆ ನಿರಾಕರಿಸುತ್ತಾರೆ ಇವೆಲ್ಲವು ನನ್ನನ್ನು ಆಕರ್ಷಿಸಿತು. ಈ ಕಥೆಯು ಒಂಟಿತನ, ಹಾಸ್ಯ, ಪಶ್ಚಾತಾಪ, ಗೊಂದಲ ಎಲ್ಲವನ್ನೂ ಒಳಗೊಂಡಿದೆ. ಇದು ಕೇವಲ ಹಾಸ್ಯವನ್ನಷ್ಟೇ ಹೇಳದೇ, ಜೀವನದ ಮೌಲ್ಯಗಳನ್ನೂ ಕೂಡ ಹೇಳುತ್ತದೆ" ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇನ್ನು ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, "ನಮ್ಮ ಕಾಪಿ ನಾವು ನೋಡಲು ಬಯಸದ ನಮ್ಮ ಒಂದು ವ್ಯಕ್ತಿವವನ್ನು ಬಿಂಬಿಸಿದರೆ ಹೇಗೆ ಇರುತ್ತದೆ. ಜೆರಾಕ್ಸ್ ಈ ಒಂದು ಭಯದಿಂದ ಹುಟ್ಟಿದ ಕಥೆ ಎಂದರೆ ತಪ್ಪಾಗಲಾರದು. ಮಳವಳ್ಳಿಯಲ್ಲಿ ನಡೆಯುವ ಈ ಒಂದು ಆಶ್ಚರ್ಯಕರ ಘಟನೆ ಹೇಗೆ ಹಲವಾರು ಹೊಸ ತಿರುವುಗಳಿಗೆ ಕಾರಣವಾಗುತ್ತದೆ, ಹೇಗೆ ಜನರ ಜೀವನವನ್ನು ಬದಲಾಯಿಸುತ್ತದೆ, ಇವೆಲ್ಲವನ್ನೂ ಕುತೂಹಲಕಾರಿಯಾಗಿ ತೋರಿಸುವ ಪ್ರಯತ್ನ `ಜೆರಾಕ್ಸ್' ಆಗಿದೆ." ಎಂದು ತಿಳಿಸಿದರು.
ನಟ ನಾಗಭೂಷಣ ಮಾತನಾಡಿ, "ನಾನು ಪ್ರಕಾಶ ಎಂಬ ಒಬ್ಬ ಸಾಮಾನ್ಯ ಜೆರಾಕ್ಸ್ ಅಂಗಡಿ ಕೆಲಸಗಾರನ ಪಾತ್ರವನ್ನು ಇದರಲ್ಲಿ ವಹಿಸಿದ್ದೇನೆ. ತನ್ನ ಜೀವನದಲ್ಲಿ ಆಗುವ ಒಂದು ಘಟನೆಯಿಂದ ಹೇಗೆ ಅವನ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ ಎಂಬುದನ್ನು ಕಥೆಯು ಹೇಳುತ್ತದೆ. ಪ್ರಕಾಶ ಸಾಮಾನ್ಯ ವ್ಯಕ್ತಿ, ಪ್ರಭಾವಿಯಲ್ಲ. ಆದರೆ ಈ ಘಟನೆಯ ನಂತರ ಎಲ್ಲರ ಜೀವನದಲ್ಲಿ ನಡೆಯುವ ಘಟನೆಗಳಿಗೆ ಇವನು ಕಾರಣಕರ್ತನಾಗಿರುತ್ತಾನೆ. ಅವನು ಶಕ್ತಿಶಾಲಿಯೇನಲ್ಲ, ಕೆಟ್ಟವನೂ ಅಲ್ಲ. ಆದರೆ ಎಲ್ಲದರ ಹಿಂದೆ ಇವನ ಕೈವಾಡವಿರುತ್ತದೆ. ಇದೊಂದು ವಿಭಿನ್ನವಾದ ಪಾತ್ರ. ವಿವಿಧ ಬಣ್ಣಗಳುಳ್ಳ ಪಾತ್ರ ಎಂದರೆ ತಪ್ಪಾಗಲಾರದು" ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು