LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ಯಶ್ ಫಿದಾ

ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮತ್ತೊಂದು ಪಾತ್ರ ಈಗ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಶೂರ್ಪನಖಿ ಪಾತ್ರದಲ್ಲಿ ನಟಿಸಿರುವ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್ ಅಭಿನಯವನ್ನು ಬಹಿರಂಗವಾಗಿ ಹೊಗಳಿದ್ದಾರೆ. ದೆಹಲಿದಲ್ಲಿ ನಡೆದ `ರಾಮಾಯಣ: ಪ್ರಥಮ್ ಸಂಕಲ್ಪ' ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಶೂರ್ಪನಖಿ ಪಾತ್ರವನ್ನು ಅವರು ನಿರ್ವಹಿಸಿದ ರೀತಿ ನಿಜಕ್ಕೂ ಗಮನಾರ್ಹವಾಗಿದೆ ಎಂದು ಹೊಗಳಿದ್ದಾರೆ. ಯಶ್ ಅವರ ಈ ಮಾತು ಅಭಿಮಾನಿಗಳಲ್ಲಿ ಸಿನಿಮಾ ಮೇಲೆ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಸಾಮಾನ್ಯವಾಗಿ ಶೂರ್ಪನಖಿ ಪಾತ್ರವನ್ನು ಒಂದೇ ದೃಷ್ಟಿಕೋನದಲ್ಲಿ ತೋರಿಸಲಾಗುತ್ತದೆ. ಆದರೆ, ಈ ಸಿನಿಮಾದಲ್ಲಿ ಆ ಪಾತ್ರವನ್ನು ಹೆಚ್ಚು ಭಾವನಾತ್ಮಕವಾಗಿ ಮತ್ತು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ರಕುಲ್ ಪ್ರೀತ್ ಸಿಂಗ್ ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಹೊಸ ಅರ್ಥ ಕೊಟ್ಟಿದ್ದಾರೆ.
ನಿಮಾದಲ್ಲಿ ರಕುಲ್ ಅವರ ಲುಕ್ ಕೂಡ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದೆ. ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಂಡ ಅವರ ಡ್ರೆಸ್ ಮತ್ತು ಲುಕ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶೂರ್ಪನಖಿ ಪಾತ್ರಕ್ಕೆ ರಕುಲ್ ಸೂಕ್ತ ಆಯ್ಕೆ ಎಂದು ಅನೇಕರು ಕಾಮೆಂಟ್ ಮಾಡುತ್ತಿದ್ದಾರೆ. ರಾಮಾಯಣ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಕನ್ನಡ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಈಗಾಗಲೇ ಭಾರೀ ಹೈಪ್ ಸೃಷ್ಟಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು