LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯತೀಂದ್ರ ಸಿದ್ದರಾಮಯ್ಯ ಎಳಸು : ಇಕ್ಬಾಲ್ ಹುಸೇನ್

ರಾಮನಗರ: ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಲ್ಲಿ ಶಕ್ತಿ ಇಲ್ಲ. ಅವರದು ಒಂದು ರೀತಿಯ ಎಳಸು ಸ್ಟೇಟ್ ಮೆಂಟ್ ಎಂದು ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು. ತಾಲೂಕಿನ ಕೈಲಾಂಚ ಹೋಬಳಿಯ ಗ್ರಾಮಗಳಲ್ಲಿ ವಿವಿಧಿ
ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ದೊಡ್ಡ ಮನೆತನದಲ್ಲಿ, ದೊಡ್ಡ ಸ್ಥಾನದಲ್ಲಿದ್ದೀರಿ. ತಾವಾಗಿ ತಾವು ಕೆಳಗಡೆ ಬೀಳೋದು ನಮಗೆ ಇಷ್ಟವಿಲ್ಲ. ಗೌರವಯುತವಾಗಿ ಹೇಳಿಕೆಗಳನ್ನು ಕೊಡಬೇಕು ಎಂದರು. ರಾಜ್ಯದಲ್ಲಿ ಸಿದ್ದರಾಮಯ್ಯ ಬಳಿಕ ಸತೀಶ್ ಜಾರಕಿಹೋಳಿ ಅವರಿಗೆ ಜವಾಬ್ದಾರಿ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಇಕ್ಬಾಲ್ ಹುಸೇನ್ ರವರು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದಾರೆ.

ನಮಗೆಲ್ಲ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಯುವ ಕಾಂಗ್ರೆಸ್ ನಿಂದ ಬಂದಂತಹ ಡಿ.ಕೆ.ಶಿವಕುಮಾರ್ ಅವರು ಅನೇಕ ಹುದ್ದೆಗಳನ್ನು ನಿಭಾಯಿಸುವ ಜೊತೆಗೆ ಸಂಕಷ್ಟಗಳನ್ನು ಎದುರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರೂ ಗೊಂದಲದ ಹೇಳಿಕೆ ಕೊಡಬಾರದು. ಯತೀಂದ್ರ ಅವರು
ತಿದ್ದುಕೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು. ಕೆಪಿಸಿಸಿಯಿಂದ ಯತೀಂದ್ರ ಅವರಿಗೆ ನೋಟೀಸ್ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಮಾಡಿದರೆ ಬಲತ್ಕಾರ, ಬೇರೆಯವರು ಮಾಡಿದರೆ ಚಮತ್ಕಾರ ಅನ್ನುವ ಪರಿಸ್ಥಿತಿ ಇದೆ. ಅವೆಲ್ಲವನ್ನೂ ಹೇಳಬಾರದು, ಅವರು ತಿದ್ದುಕೊಳ್ಳುತ್ತಾರೆ. ಇನ್ನು
ಮುಂದಾದರು ಯಾವುದೇ ರೀತಿಯ ಹೇಳಿಕೆ ನೀಡಿ ಗೊಂದಲ ಸೃಷ್ಟಿ ಮಾಡುವುದು ಬೇಡ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು