LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

" ಟಿಪ್ಪು ಪರ ಇರುವವರು ದೇಶದ್ರೋಹಿಗಳು ಮೌಲಾನಾ ವಿರುದ್ಧ ಯತ್ನಾಳ್ ವಾಗ್ದಾಳಿ"

ರಾಮನಗರ/ ವಿಜಯಪುರ: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ SDPI ನಾಯಕ ಮೌಲಾನಾ ನೂರುದ್ದೀನ್ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ವೈರಲ್ ಆಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಭಯೋತ್ಪಾದಕ ಎಂದಿರುವ ಮೌಲಾನಾ ನೂರುದ್ದೀನ್, ಪ್ರತಾಪ್ ಸಿಂಹ ಬಗ್ಗೆಯೂ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೆ, ಟಿಪ್ಪು ಸುಲ್ತಾನ್ ಇಲ್ಲದಿದ್ದರೆ ಪ್ರತಾಪ್ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು ಎಂದಿದ್ದಾರೆ.

ಮೌಲಾನಾ ನೂರುದ್ದೀನ್ ಹೇಳಿಕೆಗೆ ಇತ್ತ ಶಾಸಕ ಯತ್ನಾಳ್ ರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಗ್ಗೆ ತೀಕ್ಷ್ಣವಾಗಿ ಹೇಳಿಕೆ ನೀಡಿರುವ ಶಾಸಕರು, ಟಿಪ್ಪು ಪರ ಇರುವವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ. ಟಿಪ್ಪು ಸುಲ್ತಾನ್ ಕಾಲದಲ್ಲಿ ಲಕ್ಷಾಂತರ ಹಿಂದೂಗಳ ಕೊಲೆಯಾಗಿದೆ. ಅದೆಲ್ಲ ಇತಿಹಾಸದಲ್ಲಿ ದಾಖಲಾಗಿ, ಸಾಕ್ಷಿಯಾಗಿದೆ. ಕರ್ನಾಟಕ ಹಾಗೂ ಕೇರಳ ಸೇರಿ ೩,೫೦೦ ದೇವಸ್ಥಾನಗಳನ್ನ ಟಿಪ್ಪು ನಾಶ ಮಾಡಿದ್ದಾನೆ. ಲಕ್ಷಾಂತರ ಕೊಡವ ಸಮಾಜದವರ ನೆರಮೇಧ ನಡೆಸಿದ್ದಾನೆ. ಹೀಗಾಗಿ ನಮಗೆ ಟಿಪ್ಪು ಆದರ್ಶವಲ್ಲ, ಆತ ಹಿಂದೂ ಧರ್ಮದ ದ್ರೋಹಿಯಾಗಿದ್ದ. ಇಸ್ಲಾಮೀಕರಣ ಮಾಡಲು ಬಯಸಿದ್ದ, ಆದರೆ ಅದು ಆಗಲಿಲ್ಲ. ಅಂತವನಿಂದ ನಾವು ಆದರ್ಶ ಕಲಿಯಬೇಕಿಲ್ಲ ಎಂದಿದ್ದಾರೆ.

ಇದೇ ವೇಳೆ ದೆಹಲಿಯಲ್ಲಿ ನಡೆದ ಸ್ಫೋಟದ ವಿಚಾರವನ್ನೂ ಪ್ರಸ್ತಾಪಿಸಿರುವ ಯತ್ನಾಳ್ , ಘಟನೆಯನ್ನು ಯಾವುದೇ ಮುಸ್ಲಿಂ ಧರ್ಮಗುರುಗಳು, ಮುಖಂಡರು ಖಂಡಿಸಿಲ್ಲ. ಇಲ್ಲಿ ಶಾಂತಿ ಸಭೆ ಮಾಡಿ ಹಿಂದೂ-ಮು ಭಾಯಿ ಭಾಯಿ ಎನ್ನುತ್ತಾರೆ ಅಷ್ಟೇ. ಅವರಿಗೆ ಏನಾದರೂ ಆದರೆ ಸಿದ್ದರಾಮಯ್ಯ ಮೊದಲು ಮಾತನಾಡುತ್ತಾರೆ. ಮುಸ್ಲಿಮರ ನಿಷ್ಟೆ ದೇಶಕ್ಕಲ್ಲ, ಬದಲು ಅವರ ಧರ್ಮಕ್ಕೆ ಎಂದು ಅಂಬೇಡ್ಕರ್ ಅಂದೇ ಹೇಳಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು