LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ಅಂತರರಾಷ್ಟ್ರೀಯ ಮಟ್ಟಕ್ಕೆ ೧೭ ಮಂದಿ ಆಯ್ಕೆ: ೩ ವಿದ್ಯಾರ್ಥಿಗಳಿಗೆ ಯೋಗ ಶಿಲ್ಪಾ ಅವಾರ್ಡ್"

ಆನೇಕಲ್ : ಬೆಂಗಳೂರು ನಗರದ ಬಿ.ಎಂ.ಎಸ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಶಾಲೆಯಲ್ಲಿ ಇತ್ತೀಚೆಗೆ ಶ್ರೀ ಮಾರುತಿ ಚಾರಿಟೇಬಲ್ ಟ್ರಸ್ಟ್ ಮತ್ತು ವಿಶ್ವ ಮಾನವ ಸಮಾಜ ಸೇವಾ ಟ್ರಸ್ಟ್ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಮತ್ತು ಅಂತರರಾಷ್ಟ್ರೀಯ ಯೋಗ ಆಯ್ಕೆ ೨೦೨೫ ಮತ್ತು ಶ್ರೀಕಲ್ಪ ಸಮೂಹ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ವೆಲ್ ಸ್ಪ್ರಿಂಗ್  ಅಕಾಡಮಿ ಶಾಲೆಯ ಸುಮಾರು ೧೭ ಮಂದಿ ವಿದ್ಯಾರ್ಥಿಗಳು ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೩ಮಂದಿ ವಿದ್ಯಾರ್ಥಿ ಗಳಿಗೆ ಯೋಗ ಶಿಲ್ಪಾ ಆವಾರ್ಡ್ ನೀಡಿ ಗೌರವಿಸಿದ್ದಾರೆ.

ವೆಲ್ ಸ್ಪ್ರಿಂಗ್ ಅಕಾಡಮಿಯ ನಿರ್ದೇಶಕರಾದ ಅಕಿಲೇಶ್ವರ್ ರೆಡ್ಡಿ ಮಾತನಾಡಿ, ದೇಶದ ವಿವಿಧ ರಾಜ್ಯಗಳಿಂದ ಸುಮಾರು ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪ್ರತಿಷ್ಠಿತ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಮ್ಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ತರುವ ವಿಚಾರವಾಗಿದ್ದು ಇವರು ಮುಂಬರುವ ದಿನಗಳಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ದೇಶಕ್ಕೆ ಪದಕ ತರುವ ವಿಶ್ವಾಸವಿದೆ ಎಂದರು.

ವೆಲ್ ಸ್ಪ್ರಿಂಗ್ ಅಕಾಡಮಿಯ ನಿರ್ದೇಶಕರಾದ ದಿನೇಶ್ ರೆಡ್ಡಿ ಮಾತನಾಡಿ, ಯೋಗವು ಕೇವಲ ಕ್ರೀಡೆ ಮಾತ್ರವಲ್ಲ, ಅದು ಮನಸ್ಸು ಮತ್ತು ದೇಹದ ಶಿಸ್ತು ಹಾಗೂ ಏಕಾಗ್ರತೆಯನ್ನು ಕಲಿಸುತ್ತದೆ. ನಮ್ಮ ವಿದ್ಯಾರ್ಥಿಗಳು ರಾಷ್ಟç ಮಟ್ಟದಲ್ಲಿ ಮೆರೆದಿದ್ದು, ಇದೀಗ ಅಂತರರಾಷ್ಟ್ರೀಯ ವೇದಿಕೆಯಲ್ಲೂ ಸಹ ಭಾರತದ ಹೆಮ್ಮೆ ಹೆಚ್ಚಿಸಲಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ವೆಲ್ ಸ್ಪ್ರಿಂಗ್ ಅಕಾಡಮಿಯ ಚೇರ್ ಮೆನ್ ಪ್ರಸಾದ್ ರೆಡ್ಡಿ, ವ್ಯವಸ್ಥಪಕರಾದ ಸಂಜಯ್ಯ ರೆಡ್ಡಿ, ದೈಹಿಕ ಶಿಕ್ಷಕ ಶಶಿಕಾಂತ್ ರಾಜ್ ಅರಸ್, ಕೋಚ್ ವಿಶಾಲ್ ಗೌಡ ಹಾಗೂ ಮತ್ತಿತ್ತರರು ಹಾಜರಿದ್ದರು. ಆಯ್ಕೆಯಾದ ವಿದ್ಯಾರ್ಥಿಗಳು : ನಯಾರ ಶೆಟ್ಟಿ, ವೈಷ್ಣವಿ, ಯಾತ್ರ, ದೇವಿಕಾ, ತನ್ವೀತಾ, ವ್ಯಾಸ, ಹನಿಕ, ಇವಾ ಪ್ರಖ್, ಕೈರವಿ, ತುಷಾರ, ಎಂಜಲ್, ವೇದಶ್ರೀ, ಅದೀರಾ, ಮೈರಾ, ನಿಹರಿಕ, ಶುಭ, ಅನುಮಿತ, ನಿಶ್ಚಿತ್, ಪ್ರಣವಿ, ಇ ಶಂಖ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು